ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ: ಸಮೃಧ್ ಗೆ ದ್ವಿತೀಯ ಸ್ಥಾನ
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ: ಸಮೃಧ್ ದ್ವಿತೀಯ ಸ್ಥಾನ ರಾಯಚೂರು,ನ.29- ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಸಮೃಧ್ ಇವರಿಗೆ ದ್ವಿತೀಯ ಸ್ಥಾನ ಲಭಿಸಿದೆ. ನಿನ್ನೆ ಮಾನವಿ ತಾಲೂಕಿನ ನೀರಮಾನ್ವಿ ಆದರ್ಶ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಹೆಚ್ ಕೆ ಇ ಎಸ್ ನ್ಯಾಷನಲ್ ಇಂಗ್ಲಿಷ್ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿರುವ ಸಮೃಧ್ ತಂದೆ ಪ್ರಕಾಶ್ ರವರಿಗೆ ಮಿಮಿಕ್ರಿ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರಿದ್ದಕ್ಕಾಗಿ ದ್ವಿತೀಯ ಸ್ಥಾನ ಲಭಿಸಿದೆ.
ಕಾರ್ಯಕ್ರಮದಲ್ಲಿ ಶಾಸಕರಾದ ಹಂಪಯ್ಯ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು, ಶಿಕ್ಷಕರು ಭಾಗವಹಿಸಿದ್ದರು.
Comments
Post a Comment