ಮಟಮಾರಿ ಶ್ರೀ ಮಹಾಂತೇಶ ಸರಕಾರಿ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ
ಮಟಮಾರಿ ಶ್ರೀ ಮಹಾಂತೇಶ ಸರಕಾರಿ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ
ರಾಯಚೂರು,ನ.30- ಆದರ್ಶ ವಿದ್ಯಾಲಯ ನೀರಮಾನವಿ ಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2023-24 ನೇ ಸಾಲಿನಲ್ಲಿ ಶ್ರೀ ಮಹಾಂತೇಶ ಸರಕಾರಿ ಕರ್ನಾಟಕ ಪಬ್ಲಿಕ್ ಶಾಲೆ (ಪ್ರೌಢ ವಿಭಾಗ) ಮಟಮಾರಿ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿಯಾದ ಸಂಗೀತಾ ತಂದೆ ವಿರುಪಾಕ್ಷ ಜನಪದ ಗೀತೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಶಾಲೆಯ ಮುಖ್ಯಗುರುಗಳು ಸಲೀಮ್ ಪಾಶಾ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಶಾಲೆಗೆ ಕೀರ್ತಿ ತಂದಿದ್ದಕ್ಕಾಗಿ ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ.
Comments
Post a Comment