ಡಿ.24 ರಂದು ಎಕೆಬಿಎಂಎಸ್ ಕ್ಯಾಲೆಂಡರ್ ಬಿಡುಗಡೆ ಹಾಗೂ ವಿಪ್ರ ಸಾಧಕರಿಗೆ ಸನ್ಮಾನ.

 


ಡಿ.24 ರಂದು ಎಕೆಬಿಎಂಎಸ್ ಕ್ಯಾಲೆಂಡರ್ ಬಿಡುಗಡೆ ಹಾಗೂ ವಿಪ್ರ ಸಾಧಕರಿಗೆ ಸನ್ಮಾನ.           ರಾಯಚೂರು,ಡಿ.22- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ 2024ರ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಹಾಗು ವಿಪ್ರ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಡಿ.24 ರಂದು ಆಯೋಜಿಸಲಾಗಿದೆ.                                 ಅಂದು ಸಂಜೆ 5.30ಕ್ಕೆ ಬೊಳಮಾನದೊಡ್ಡಿ ರಸ್ತೆಯ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮ ಉದ್ಘಾಟನೆಯನ್ನು ಮಂತ್ರಾಲಯ ಶ್ರೀ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ನಿವೃತ್ತ ಪ್ರಾಂಶುಪಾಲ ಡಾ.ಎನ್.ವಾದಿರಾಜಾಚಾರ್ಯ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಕೆಬಿಎಂಎಸ್ ಹಿರಿಯ ರಾಜ್ಯ ಪರಿಷತ್ ಸದಸ್ಯ ನರಸಿಂಗರಾವ್ ದೇಶಪಾಂಡೆ, ಎಕೆಬಿಎಂಎಸ್ ರಾಜ್ಯ ಉಪಾಧ್ಯಕ್ಷ ಡಾ.ಆನಂದತೀರ್ಥ ಫಡ್ನೀಸ್ ಆಗಮಿಸಲಿದ್ದು, ಅಧ್ಯಕ್ಷತೆಯನ್ನು ಎಕೆಬಿಎಂಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಜಿಲ್ಲಾ ಪ್ರಧಾನ ಸಂಚಾಲಕ ಡಿ.ಕೆ.ಮುರಳೀಧರ್ ವಹಿಸಲಿದ್ದಾರೆ.                           ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸರಾದ ಕಿಶನರಾವ್ ಜಾಲಿಹಾಳ, ದಾಸ ಸಾಹಿತ್ಯ ವಿದುಷಿ ಗಳಾದ ಡಾ.ಸುಧಾ ದೇಶಪಾಂಡೆ ರವರಿಗೆ ಸನ್ಮಾನ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವಿಪ್ರರು ಪಾಲ್ಗೊಳ್ಳುವಂತೆ ಕೋರಲಾಗಿದೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ