ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅಧಿಕಾರ ಸ್ವೀಕಾರ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅಧಿಕಾರ ಸ್ವೀಕಾರ ರಾಯಚೂರು,ಜ.31- ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅಧಿಕಾರ ಸ್ವೀಕರಿಸಿದರು. ಇಂದು ಬೆಂಗಳೂರಿನ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಶಾಸಕರು ಪರಿಶಿಷ್ಟ ಪಂಗಡಗಳ ನಿಗಮದ ವತಿಯಿಂದ ದೊರೆಯುವ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿತ್ತೇನೆ, ಇಲಾಖೆಯ ಪ್ರತಿಯೊಂದು ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ ಎಂದರು. ನನಗೆ ಹುದ್ದೆ ದೊರೆಯಲು ಮುಖ್ಯ ಕಾರಣೀಭೂತರಾದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆರವರಿಗೆ, ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರಿಗೆ ಮತ್ತು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ ಕೆ...