ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ನಮ್ಮದೆ ಗೆಲುವು: ಅಲ್ಪಸಂಖ್ಯಾತರ ಓಲೈಕೆಯಲ್ಲಿ ಕಾಂಗ್ರೆಸ್ ಸರ್ಕಾರ- ಬಿ.ವೈ.ವಿಜಯೇಂದ್ರ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ನಮ್ಮದೆ ಗೆಲುವು: ಅಲ್ಪಸಂಖ್ಯಾತರ ಓಲೈಕೆಯಲ್ಲಿ ಕಾಂಗ್ರೆಸ್ ಸರ್ಕಾರ- ಬಿ.ವೈ.ವಿಜಯೇಂದ್ರ. ರಾಯಚೂರು,ಜ.28- ಅಯೋಧ್ಯೆ ರಾಮಮಂದಿರ ಬಿಜೆಪಿ ಕಾರ್ಯಕ್ರಮವೆಂದು ಬಿಂಬಿಸಿ ಅದರಲ್ಲಿ ತಾವು ಭಾಗವಹಿಸಿದರೆ ಅಲ್ಪಸಂಖ್ಯಾತರು ಬೇಸರ ವ್ಯಕ್ತಪಡಿಸಬಹುದೆಂಬ ಕ್ಷುಲ್ಲಕ ಓಲೈಕೆ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಅವರಿಂದು ನಗರದ ಗಂಜ್ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದೆ ಕಾಂಗ್ರೆಸಿಗರು ಅದನ್ನು ಬಿಜೆಪಿ ಕಾರ್ಯಕ್ರಮವೆಂದು ಬಿಂಬಿಸಿ ತಾವು ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋದರೆ ಅಲ್ಪ ಸಂಖ್ಯಾತರು ಬೇಸರ ಮಾಡಿಕೊಳ್ಳಬಹುದು ಎಂಬ ಕ್ಷುಲ್ಲಕ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದರು. ಹಿಂದು ವಿರೋಧಿ ನೀತಿ ಅನುಸರಿಸುತ್ತ ಕಾಂಗ್ರೆಸ್ ನಾಯಕರು ಕಾನೂನು ಸುವ್ಯವಸ್ಥೆ ಹದಗೆಡಿಸುತ್ತಿದ್ದಾರೆ ಎಂದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.
ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಶಕ್ತಿ ನಿಮ್ಮಲ್ಲಿದೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸುವ ಪಣ ಕಾರ್ಯಕರ್ತರು ತೊಡಬೇಕೆಂದರು. ನಿನ್ನೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಹುತೇಕ ಎಲ್ಲಾ ಸದಸ್ಯರು ಆಗಮಿಸಿದ್ದರು ಅದನ್ನು ನೋಡಿದಾಗ ರಾಜ್ಯದಲ್ಲಿ ಬಿಜೆಪಿಯು ಸೋತಿರಬಹುದು ಆದರೆ ಕಾರ್ಯಕರ್ತರಲ್ಲಿ ಹುಮ್ಮಸ್ಸು ಇದೆ ಎಂದರು. ದೇಶವಾಳಿದ ಗಾಂಧಿ ಕುಟುಂಬ ಭ್ರಷ್ಟಾಚಾರದಿಂದ ದೇಶದ ಸಂಪತ್ತು ಲೂಟಿ ಮಾಡಿದೆ ಎಂದ ಅವರು ಕಳೆದ 10 ವರ್ಷದ ಮೋದಿ ಸರ್ಕಾರದಲ್ಲಿ ಭ್ರಷ್ಟಾಚಾರದ ಒಂದು ಕಪ್ಪು ಚಕ್ಕೆಯಿಲ್ಲವೆಂದರು. ರಾಜ್ಯದಲ್ಲಿ ಹುಸಿ ಗ್ಯಾರಂಟಿಗಳ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಸಂಸದರಾದ ಅಮರೇಶ್ವರ ನಾಯಕ, ಕರಡಿ ಸಂಗಣ್ಣ,ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಡಾ. ಶಾಸಕ ಡಾ.ಶಿವರಾಜ ಪಾಟೀಲ್ ಸರ್ವರನ್ನು ಸ್ವಾಗತಿಸಿದರು, ಶಂಕರ್ ರೆಡ್ಡಿ ನಿರೂಪಿಸಿದರು.
ವೇದಿಕೆ ಮೇಲೆ ಮಾಜಿ ಸಂಸದ ಬಿ.ವಿ .ನಾಯಕ, ಮಾಜಿ ಶಾಸಕರಾದ ರಾಜುಗೌಡ, ಎ.ಪಾಪಾರೆಡ್ಡಿ, ಪಿ.ರಾಜೀವ, ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಕೆ.ಕರಿಯಪ್ಪ, ರಾಜ ಕುಮಾರ್, ರವೀಂದ್ರ ಜಲ್ದಾರ್ ಸೇರಿದಂತೆ ಅನೇಕರು ಇದ್ದರು.
Comments
Post a Comment