ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಕಟ್ಟಡ ಅಭಿವೃದ್ಧಿಗೆ ಅನುದಾನ‌ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರಕರ್ತರಿಂದ ಮನವಿ

 


ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಕಟ್ಟಡ ಅಭಿವೃದ್ಧಿಗೆ ಅನುದಾನ‌ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರಕರ್ತರಿಂದ ಮನವಿ


ರಾಯಚೂರು,ಜ.26- ನಗರದ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನ ನೀಡುವಂತೆ ಕೋರಿ‌‌ ನಗರದ ಪತ್ರಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ಗೆ ಮನವಿ ಸಲ್ಲಿಸಿದರು. ಗಣರಾಜ್ಯೋತ್ಸವ ಧ್ವಜಾರೋಹಣ ಹಿನ್ನೆಲೆ ನಗರಕ್ಕೆ ಆಗಮಿಸಿದ್ದ ಸಚಿವರಿಗೆ ಪತ್ರಕರ್ತರು ಮನವಿ ಮಾಡಿದ್ದಾರೆ.


ನಗರದ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ನಗರದ ಪತ್ರಕರ್ತರ ಶ್ರೇಯಾಭಿವೃದ್ದಿಗೆ ನಿರಂತರ ಶ್ರಮಿಸುತ್ತಿದ್ದು ಹಾಗೂ ಸಾರ್ವಜನಿಕರಿಗೆ ಪತ್ರಿಕಾಗೋಷ್ಠಿಗಳನ್ನ ನಡೆಸಲು ಉತ್ತಮ ಸ್ಥಳ ,ಸೌಲಭ್ಯಗಳನ್ನ ನೀಡುತ್ತ ಬಂದಿದೆ. ಈಗ ಗಿಲ್ಡ್ ‌ನ ಕಟ್ಟಡ ಹಳೆಯದಾಗಿದ್ದು ಕಟ್ಟಡದ ದುರಸ್ತಿ ಕಾರ್ಯ ಹಾಗೂ ಅಭಿವೃದ್ಧಿ ಕಾರ್ಯಗಳನ್ನ ಕೈಗೆತ್ತಿಕೊಳ್ಳುವ ಅನಿವಾರ್ಯತೆಯಿದೆ. ಹೀಗಾಗಿ ಕಟ್ಟಡದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡುವಂತೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಮನವಿ ಮಾಡಲಾಯಿತು.



ಕಟ್ಟಡದ ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಪೀಠೋಪಕರಣಗಳು, ಆವರಣದಲ್ಲಿ ನೆಲಹಾಸು, ಶೌಚಾಲಯ, ಕಟ್ಟಡಕ್ಕೆ ಬಣ್ಣ ಬಳಿಯುವುದು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಬೇಕಾಗಿದ್ದು ತಮ್ಮ ಅನುದಾನದಲ್ಲಿ ಅಗತ್ಯ ಆರ್ಥಿಕ ನೆರವು ನೀಡಬೇಕೆಂದು ಪತ್ರಕರ್ತರು ಸಚಿವರಿಗೆ ಮನವಿ ಮಾಡಿದರು.

ಪತ್ರಕರ್ತರ ಮನವಿ ಸ್ವೀಕರಿಸಿದ ಸಚಿವರು ಕೂಡಲೇ ಮನವಿಗೆ ಸ್ಪಂದಿಸುವುದಾಗಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್‌‌ಗೆ ಕಟ್ಟಡ ಅಭಿವೃದ್ಧಿ ಕುರಿತು ಸಂಪೂರ್ಣ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ‌ನ ಪದಾಧಿಕಾರಿಗಳು, ನಗರದ ಹಿರಿಯ ಹಾಗೂ ಕಿರಿಯ ಪತ್ರಕರ್ತರು ಹಾಜರಿದ್ದರು.

Comments

Popular posts from this blog