ಇಡಪನೂರ, ತಲಮಾರಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದದ್ದಲ್ ರಿಂದ ಭೂಮಿ ಪೂಜೆ ಮತ್ತು ಉದ್ಘಾಟನೆ
ಇಡಪನೂರ, ತಲಮಾರಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದದ್ದಲ್ ರಿಂದ ಭೂಮಿ ಪೂಜೆ ಮತ್ತು ಉದ್ಘಾಟನೆ
ರಾಯಚೂರು,ಜ.30- ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ರವರು
ಇಂದು ಇಡಪನೂರ, ತಲಮಾರಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಮತ್ತು ಉದ್ಘಾಟನೆಯನ್ನು ನೆರವೇರಿಸಿದರು.
ಇಡಪನೂರ ಗ್ರಾಮದಲ್ಲಿ ನೂತನವಾಗಿ ಆಯುಷ್ ಆಸ್ಪತ್ರೆ ಕಟ್ಟಡ ಭೂಮಿ ಪೂಜೆ ಹಿಂದುಳಿದ ವರ್ಗಗಳು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಕಟ್ಟಡ* ಭೂಮಿ ಪೂಜೆ ಆರಾಧನಾ ಯೋಜನೆಯಡಿಯಲ್ಲಿ ಭೀಮರಾಯ ಗುಡಿ ಅಭಿವೃದ್ಧಿ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ 06 ಕೊಠಡಿಗಳ ಉದ್ಘಾಟನೆ ನೆರವೇರಿಸಿದರು ಹಾಗೂ ತಲಮಾರಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಊರಿನ ಹಿರಿಯ ಮುಖಂಡರುಗಳು, ಸುತ್ತಮುತ್ತಲಿನ ಗ್ರಾಮಗಳ ಮುಖಂಡರುಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರುಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
Comments
Post a Comment