ಕೇಂದ್ರ ಬಜೆಟ್ ನಲ್ಲಿ ಏಮ್ಸ್ ಘೋಷಣೆಗೆ ನಿರ್ಮಲಾ ಸೀತಾರಾಮನ್ ಗೆ ಸಿಎಂ ಪತ್ರ.
ಕೇಂದ್ರ ಬಜೆಟ್ ನಲ್ಲಿ ಏಮ್ಸ್ ಘೋಷಣೆಗೆ ನಿರ್ಮಲಾ ಸೀತಾರಾಮನ್ ಗೆ ಸಿಎಂ ಪತ್ರ. ರಾಯಚೂರು,ಜ.30- ಕೇಂದ್ರ ಬಜೆಟ್ ನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಘೋಷಿಸಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಒತ್ತಾಯಿಸಿದ್ದಾರೆ.
ಈ ಹಿಂದೆ ರಾಜ್ಯ ಸರ್ಕಾರದಿಂದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಕ ಮಾಂಡವೀಯ ರವರಿಗೆ ಬರೆದ ಪತ್ರವನ್ನು ಲಗತ್ತಿಸಲಾಗಿದ್ದು ಈ ಬಗ್ಗೆ ಸಚಿವ ಎನ್.ಎಸ್. ಬೋಸರಾಜುರವರೊಂದಿಗೆ ಏಮ್ಸ್ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಬಸವರಾಜ ಕಳಸ ಸಂಪರ್ಕ ಮಾಡಿದ್ದು ಅವರ ಮೂಲಕ ಮಾಹಿತಿ ದೊರೆತಿದ್ದು ಕೇಂದ್ರ ಬಜೆಟ್ ನಲ್ಲಿ ರಾಯಚೂರಿಗೆ ಏಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದಾರೆ.
Comments
Post a Comment