ಬಸನಗೌಡ ದದ್ದಲ್ ರಿಂದ ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ್ ಹಾಗೂ ಪ್ರೀಯಾಂಕ್ ಖರ್ಗೆ ಭೇಟಿ
ಬಸನಗೌಡ ದದ್ದಲ್ ರಿಂದ ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ್ ಹಾಗೂ ಪ್ರಿಯಾಂಕ್ ಖರ್ಗೆ ಭೇಟಿ ರಾಯಚೂರು,ಜ.31-ರಾಜ್ಯ ಸರಕಾರದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ರವರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ್ ಹಾಗೂ ಸಚಿವರಾದ ಪ್ರಿಯಾಂಕ್ ಖರ್ಗೆ ಯವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಹಂಪನಗೌಡ ಬಾದರ್ಲಿ, ಶರತ ಬಚ್ಚೆಗೌಡ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಪಾಟೀಲ್ ಇಟಗಿ, ಎ.ವಸಂತಕುಮಾರ, ಡಾ.ರಝಾಕ ಉಸ್ತಾದ, ಅಬ್ದುಲ ಕರೀಮ ಹಾಗೂ ಇತರರು ಉಪಸ್ಥಿತರಿದ್ದರು.
Comments
Post a Comment