ಬಿಜೆಪಿ ಜಿಲ್ಲಾ ಉಸ್ತುವಾರಿಯಾಗಿ ದೊಡ್ಡನಗೌಡ ಹೆಚ್ ಪಾಟೀಲ್ ನೇಮಕ
ಬಿಜೆಪಿ ಜಿಲ್ಲಾ ಉಸ್ತುವಾರಿಯಾಗಿ ದೊಡ್ಡನಗೌಡ ಹೆಚ್ ಪಾಟೀಲ್ ನೇಮಕ
ರಾಯಚೂರು,ಜ.27- ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಪಕ್ಷ ಭರ್ಜರಿ ಸಿದ್ಧತೆ ಕೈಗೊಂಡಿದೆ, ಮೊದಲ ಹಂತದ ಸಿದ್ಧತೆಯ ಭಾಗವಾಗಿ 28 ಕ್ಷೇತ್ರಗಳಿಗೆ ಉಸ್ತುವಾರಿ ಹಾಗೂ ಸಂಚಾಲಕರನ್ನು ನೇಮಕ ಮಾಡಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ಲೋಕಸಭಾ ಚುನಾವಣೆ ಕುತೂಹಲ ಕೆರಳಿಸಿದೆ ಬಿಜೆಪಿ ಪಕ್ಷದಿಂದ ಹಾಲಿ ಸಂಸದರಾದ ರಾಜ ಅಮರೇಶ್ ನಾಯಕ್ ಮಾಜಿ ಸಂಸದ ಬಿ ವಿ ನಾಯಕ್, ಹಾಗೂ ಮಾಜಿ ಶಾಸಕರಾದ ತಿಪ್ಪರಾಜ್ ಹವಾಲ್ದಾರ್ ಪೈಪೋಟಿಯಲ್ಲಿದ್ದಾರೆ, ಕಾಂಗ್ರೆಸ್ ಪಕ್ಷದಿಂದ ಕುಮಾರ್ ನಾಯಕ್, ರವಿ ಪಾಟೀಲ್ ಹಾಗೂ ದೇವಣ್ಣ ನಾಯಕ್ ಹೆಸರು ಕೇಳಿಬರುತ್ತಿದೆ, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ಜಿಲ್ಲೆಯ ಉಸ್ತುವಾರಿಯನ್ನು ನೇಮಕ ಮಾಡಿದ್ದಾರೆ, ಈಗ ಭಾರತೀಯ ಜನತಾ ಪಾರ್ಟಿ ತಮ್ಮ ಪಕ್ಷದ ಹಿರಿಯ ಮುಖಂಡರಾದ ದೊಡ್ಡನಗೌಡ ಪಾಟೀಲ್ ಅವರನ್ನು ರಾಯಚೂರು ಲೋಕಸಭಾ ಕ್ಷೇತ್ರದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ದೊಡ್ಡನಗೌಡ ಪಾಟೀಲ್ ಅವರು ಪಕ್ಕದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಾಲಿ ಶಾಸಕರು ಹಾಗೂ ಕೊಪ್ಪಳ ಜಿಲ್ಲೆಯ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರು ಹಾಗೂ ಹಾಲಿ ವಿರೋಧ ಪಕ್ಷದ ಮುಖ್ಯ ಸಚೇತಕರು ವಿಧಾನಸಭೆಯಾಗಿದ್ದಾರೆ, ಮೂರನೇ ಭಾರಿ ಶಾಸಕರಾಗಿ ಆಯ್ಕೆಯಾಗಿರುವ ಇವರು ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಇಪ್ಪತ್ತು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ತಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಅದೇ ರೀತಿ ರಾಯಚೂರು ಲೋಕಸಭಾ ಚುನಾವಣೆಯ ಜಿಲ್ಲಾ ಸಂಚಾಲಕರಾಗಿ ಗುರುಕಮ ಅವರನ್ನು ನೇಮಕ ಮಾಡಲಾಗಿದೆ.
Comments
Post a Comment