ಉದ್ಯೋಗವಕಾಶ, ಕಲಿಕಾ ಕೇಂದ್ರದ ಸದುಪಯೋಗ ಪಡೆದುಕೊಳ್ಳಿ- ಎಲ್.ಚಂದ್ರಶೇಖರ ನಾಯಕ
ಉದ್ಯೋಗವಕಾಶ, ಕಲಿಕಾ ಕೇಂದ್ರದ ಸದುಪಯೋಗ ಪಡೆದುಕೊಳ್ಳಿ- ಎಲ್.ಚಂದ್ರಶೇಖರ ನಾಯಕ
ರಾಯಚೂರು,ಫೆ.19- ಜಿಲ್ಲೆಯ ಯುವಕ ಯುವತಿಯರಿಗೆ, ಪದವಿಧರರಿಗೆ ಹಾಗೂ ನಿರುದ್ಯೋಗಿ ಯುವಕ ಯುವತಿಯರಿಗೆ ತಮ್ಮ ಮುಂದಿನ ಜೀವನದಲ್ಲಿ ಬೇಕಾದ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯಾಭಿವೃದ್ಧಿಗಾಗಿ ಉದ್ಯೋಗ, ಅವಕಾಶ ಮತ್ತು ಕಲಿಕಾ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಯುವ ಜನತೆ ಈ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಹೇಳಿದರು.
ಅವರಿಂದು ನಗರದ ಮಹತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದ ಯುವ ಸಬಲೀಕರಣ ಮತ್ತು ಕ್ರೀಡಾ ಇಳಾಖೆಯ ಕಚೇರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಸೆಂಟರ್ ಫಾರ್ ಎಂಪ್ಲಾಯಿಮೆಂಟ್, ಅಪಾರ‍್ಚುನಿಟಿ ಆ್ಯಂಡ್ ಲರ‍್ನಿಂಗ್ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿರುವ ಯುವಕರು, ನಿರುದ್ಯೋಗಿಗಳಿಗೆ ವೃತ್ತ ಮಾರ್ಗದರ್ಶನ, ತರಬೇತಿ ಹಾಗೂ ಉದಯೋಗ ಅವಕಾಶಗಳ ಬಗ್ಗೆ ತಿಳಿದುಕೊಳ್ಳಲು ನಗರದಲ್ಲಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಇದರಿಂದ ವಿದ್ಯಾರ್ಥಿಗಳು, ನಿರುದ್ಯೋಗಿ ಯುವಕರು ತಮ್ಮ ಕೌಶಲ್ಯ ಅಭಿವೃದ್ಧಿಯ ಜಿತೆಗೆ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ಹೆಡ್ ಹೆಲ್ಡ್ ಹೈ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಂಕಜ್ ಸಿಂಗ್, ನಿರ್ದೇಶಕರಾದ ಕುಮಾರ ಮಂಜುನಾಥ, ದೇವಶೀಷ ದೋಬೆ, ಮಹತ್ವಾಕಾಂಕ್ಷೆ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಯೂಸೂಫ್ ಅಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Comments
Post a Comment