ರಾಜಾವೆಂಕಟಪ್ಪ ನಾಯಕ ನಿಧನಕ್ಕೆ ಸಚಿವರಿಂದ ಸಂತಾಪ : ಪಕ್ಷಕ್ಕೆ ಹಾಗೂ ಕಲ್ಯಾಣ ಕರ್ನಾಟಕಕ್ಕೆ ತುಂಬಲಾರದ ನಷ್ಟ- ಎನ್.ಎಸ್. ಬೋಸರಾಜು

 


ರಾಜಾವೆಂಕಟಪ್ಪ ನಾಯಕ ನಿಧನಕ್ಕೆ ಸಚಿವರಿಂದ ಸಂತಾಪ :

ಪಕ್ಷಕ್ಕೆ ಹಾಗೂ ಕಲ್ಯಾಣ ಕರ್ನಾಟಕಕ್ಕೆ ತುಂಬಲಾರದ ನಷ್ಟ- ಎನ್.ಎಸ್ ಬೋಸರಾಜು

ರಾಯಚೂರು,ಫೆ.25- ಸುರಪುರದ ಶಾಸಕರು ಹಾಗೂ ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷರಾದ ರಾಜಾ ವೆಂಕಟಪ್ಪ ನಾಯಕ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ಅತೀವ ನೋವುಂಟು ಮಾಡಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವರಾದ ಎನ್ಎಸ್ ಬೋಸರಾಜು ಅವರು ಸಂತಾ ಸೂಚಿಸಿ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಬಹುಕಾಲದ ನನ್ನ ಹಿರಿಯ ಒಡನಾಡಿ ರಾಜಾ ವೆಂಕಟಪ್ಪ‌ ನಾಯಕರು 1999 ರಲ್ಲಿ ಎರಡನೆ ಬಾರಿಗೆ ಶಾಸಕರಾಗಿದ್ದರು ನಾನು ಮೊದಲ ಬಾರಿ ಶಾಸಕನಾಗಿ ಅವರೊಂದಿಗೆ ವಿಧಾನಸಭೆ ಪ್ರವೇಶಿಸಿದ್ದೆ. ಅಂದು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಅನೇಕ ವಿಷಯಗಳನ್ನು ವಿಧಾನಸೌಧದಲ್ಲಿ ಜಂಟಿಯಾಗಿ ಮಾತನಾಡಿದ್ದೆವು. ಅವರ ಅಗಲಿಕೆ ಪಕ್ಷಸಂಘಟನೆಗೆ, ಕಲ್ಯಾಣ ಕರ್ನಾಟಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಅವರ ಜೊತೆಗಿನ ಹಳೆಯ ನೆನಪುಗಳನ್ನು ಮೆಲಕು ಹಾಕಿದ್ದಾರೆ.

ಹಿರಿಯರಾದ ವೆಂಕಟಪ್ಪ ನಾಯಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ‌.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್