ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪಿಸುವಂತೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಪತ್ರ

 

  


ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪಿಸುವಂತೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಪತ್ರ
                                                                                       ರಾಯಚೂರು,ಫೆ.26- ಜಿಲ್ಲಾ ಏಮ್ಸ್ ಹೋರಾಟ ಸಮಿತಿ ರಾಯಚೂರಿನಲ್ಲಿಯೇ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ನಡೆಸುತ್ತಿರುವ ಸುಧೀರ್ಘ ಹೋರಾಟವನ್ನು ಪರಿಗಣಿಸಿ ಮುಖ್ಯಮಂತ್ರಿಗಳ ಶಿಫಾರಸ್ಸು ಪತ್ರಗಳಿಗೆ ಗೌರವಿಸಿ ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪಿಸುವಂತೆ ಆಗ್ರಹಿಸಿ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಯಿತು. ನವ ದೆಹಲಿಯ ಜಂತರ್ ಮಂತರ್ ನಲ್ಲಿ ಏಮ್ಸ್ ಹೋರಾಟ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲು ನವ ದೆಹಲಿಯ ಡಿಸಿಪಿ ( ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ) ಅವರಿಗೆ ಫೆಬ್ರವರಿ 20 ರಂದೇ ಮನವಿ ಪತ್ರ ಸಲ್ಲಿಸಲಾಗಿತ್ತು.  ಆದರೆ ದೆಹಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡಲು ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ, ಯಾವುದೇ ಧರಣಿ ಮೆರವಣಿಗೆ ಹೋರಾಟಗಳನ್ನು ನಿಷೇಧಿಸಲಾಗಿದೆ ಎಂದು ಡಿಸಿಪಿ ನವ ದೆಹಲಿ ಯವರು ಹೋರಾಟ ಸಮಿತಿಗೆ ಪತ್ರ ನೀಡಿ ಧರಣಿ ಸತ್ಯಾಗ್ರಹ ನಡೆಸುವ ಕೋರಿಕೆಯನ್ನು ತಿರಸ್ಕರಿಸಿದ್ದಾರೆ. ದೆಹಲಿಯ ಪರಿಸ್ಥಿತಿಯನ್ನು ಪರಿಗಣಿಸಿ ಉದ್ದೇಶಿತ  ಧರಣಿ ಸತ್ಯಾಗ್ರಹದ ಬದಲಾಗಿ ಜಂತರ್ ಮಂತರ ನಲ್ಲಿಯೇ ಡಿ ಸಿ ಪಿ ಯವರ ಮುಖಾಂತರ ಪ್ರಧಾನಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಯಿತು. 

ಐ ಐ ಟಿ ಯಿಂದ ವಂಚಿತಗೊಂಡ, ವಿಶೇಷ ಸ್ಥಾನಮಾನ ಕೊಳ ಪಟ್ಟ, ಹಿಂದುಳಿದ, ರೋಗಗ್ರಸ್ತ, ಮಹತ್ವಕಾಂಕ್ಷಿ ಜಿಲ್ಲೆಗೆ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಸ್ಥಾಪಿಸಲೇಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ರಾಯಚೂರಿನಲ್ಲಿ ಕಳೆದ 655 ದಿನಗಳಿಂದ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಯುತ್ತಿದೆ .ನಮ್ಮ ಹೋರಾಟದ ಬೇಡಿಕೆಗೆ ಮನ್ನಣೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ ಮಾಂಡೋವಿಯ ರವರಿಗೆ ಎರಡು ಶಿಫಾರಸ್ಸು ಪತ್ರಗಳನ್ನು ಮತ್ತು ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ರವರಿಗೆ ಒಂದು ಪತ್ರವನ್ನು ನೀಡಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಮನವಿ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಇದುವರೆಗೂ ನಿರಂತರ ಹೋರಾಟವನ್ನು ಪರಿಗಣಿಸಿರುವುದಿಲ್ಲ ಮತ್ತು ಮುಖ್ಯಮಂತ್ರಿಗಳ ಶಿಫಾರಸ್ಸು ಪತ್ರಗಳಿಗೂ ಗೌರವ ನೀಡದೆ ಅತ್ಯಂತ ಬೆಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ಬಗ್ಗೆ ಏಮ್ಸ್ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ. ರೈತರ ಹೋರಾಟದ ಹಿನ್ನೆಲೆಯಲ್ಲಿ ನವ ದೆಹಲಿಯಲ್ಲಿ ಸೆಕ್ಷನ್ 144  ಜಾರಿಯಲ್ಲಿದ್ದು ಉದ್ವಿಗ್ನ ಪರಿಸ್ಥಿತಿ ಇರುವುದರಿಂದ ಡಿಸಿಪಿ ಯವರ ಸಲಹೆ ಮೇರೆಗೆ ಉದ್ದೇಶಿತ ಧರಣಿ ಸತ್ಯಾಗ್ರಹದ ಬದಲಾಗಿ ಜಂತರ್ ಮಂತರ್ನಲ್ಲಿಯೇ ಡಿಸಿಪಿ ಯವರ ಮುಖಾಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತು ಗೃಹ ಸಚಿವ ಅಮಿತ್ ಶಾ  ರವರಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಯಿತು. ನಮ್ಮ ಸುಧೀರ್ಘ ಹೋರಾಟವನ್ನು ಪರಿಗಣಿಸಿ ಮುಖ್ಯಮಂತ್ರಿಗಳ ಶಿಫಾರಸ್ಸು ಪತ್ರಗಳಿಗೆ ಗೌರವಿಸಿ ಚುನಾವಣೆ ಘೋಷಣೆ ಪೂರ್ವದಲ್ಲಿಯೇ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಬಗ್ಗೆ ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟಿಸಬೇಕೆಂದು ಆಗ್ರಹಿಸಲಾಯಿತು. ಏಮ್ಸ್ ಗಾಗಿ ನಡೆಯುತ್ತಿರುವ ಹೋರಾಟಕ್ಕೆ ಇಂದು ನವ ದೆಹಲಿಯ ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಫೌಂಡೇಶನ್ ಸಂಪೂರ್ಣವಾಗಿ ಬೆಂಬಲ ನೀಡಿದೆ .  ಏಮ್ಸ್ ಸ್ತಾಪನೆ ಆಗುವವರೆಗೂ ನಮ್ಮ ಬೆಂಬಲ ನಿರಂತರವಾಗಿರುತ್ತದೆ ಎಂದು ಅಧ್ಯಕ್ಷ ವೈಜಿನಾಥ್ ವಿ. ಬಿರಾದರ್ ಘೋಷಿಸಿರುತ್ತಾರೆ.


 ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕ ಡಾ. ಬಸವರಾಜ ಕಳಸ, ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಫೌಂಡೇಶನ್ ನವ ದೆಹಲಿ ಅಧ್ಯಕ್ಷ ವೈಜಿನಾಥ್ ವಿ. ಬಿರಾದರ್, ಅಮರೇಗೌಡ ಪಾಟೀಲ್, ವಿನಯ್ ಕುಮಾರ್ ಚಿತ್ರಗಾರ್, ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಬಸವರಾಜ ನಾಡಗೌಡ ಮುಂತಾದವರು ಉಪಸ್ಥಿತರಿದ್ದರು. 

 

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ