ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ : ಮಾ.3 ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಜಿಲ್ಲಾ ಮಹಿಳಾ ಘಟಕದಿಂದ ಪ್ರಥಮ ಮಹಿಳಾ ಸಮಾವೇಶ- ಮಿರ್ಜಾಪೂರು.

 


ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ :        ಮಾ.3 ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಜಿಲ್ಲಾ ಮಹಿಳಾ ಘಟಕದಿಂದ   ಪ್ರಥಮ ಮಹಿಳಾ ಸಮಾವೇಶ- ಮಿರ್ಜಾಪೂರು.                                                                           ರಾಯಚೂರು,ಫೆ.27- ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಜಿಲ್ಲಾ ಮಹಿಳಾ ಘಟಕದಿಂದ ಜಿಲ್ಲಾ ಮಟ್ಟದ ಪ್ರಥಮ ಮಹಿಳಾ ಸಮಾವೇಶ ಮತ್ತು ಸಾಧಕರಿಗೆ ಅಕ್ಕ ಪ್ರಶಸ್ತಿ ಪ್ರದಾನ ಹಾಗೂ ತಾಲೂಕ ಘಟಕಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಮಾ.3 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ  ಮಿರ್ಜಾಪೂರು ಹೇಳಿದರು.                  ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅಂದು ಬೆಳಿಗ್ಗೆ 10.30ಕ್ಕೆ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮ ಸಾನಿಧ್ಯವನ್ನು ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಶ್ರೀಗಳು, ಸೋಮವಾರಪೇಟೆ ಹಿರೇಮಠದ ಶ್ರೀ ಅಭಿನವ ರಾಚೋಟಿ ವೀರಶಿವಾಚಾರ್ಯ ಶ್ರೀ ಗಳು ವಹಿಸಲಿದ್ದು ,ಉದ್ಘಾಟನೆಯನ್ನು ಮುಕ್ತಾಂಬ ಬಸವರಾಜ ಮಾಡಲಿದ್ದು, ಪ್ರಶಸ್ತಿ ಪ್ರದಾನವನ್ನು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮಾಡಲಿದ್ದು, ಬಹುಮಾನ ವಿತರಣೆಯನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಮಾಡಲಿದ್ದಾರೆ ಎಂದರು.   

                                          ಪ್ರಮಾಣ ಪತ್ರ ವಿತರಣೆಯನ್ನು ಶಾಸಕ ಡಾ.ಶಿವರಾಜ ಪಾಟೀಲ್  ಮಾಡಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಮಧುರಾ ಅಶೋಕ್, ಗೌರಮ್ಮ ಸಿದ್ದಾರೆಡ್ಡಿ, ಪಾರ್ವತಿ ಕಾರೆಡ್ಡಿ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದರು.                                                   ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲೆಯ ಎಲ್ಲಾ ತಾಲೂಕುಗಳ ಮಹಿಳಾ ಸಾಧಕರನ್ನು ಗುರುತಿಸಿ ಅಕ್ಕ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.                                 ಈ ಸಂದರ್ಭದಲ್ಲಿ ಪರಮೇಶ್ವರ್ ಸಾಲಿಮಠ,ರೇಖಾ ಕೇಶವರೆಡ್ಡಿ,ಸುಲೋಚನಾ ಆಲ್ಕೂರು,ವಿಜಯ ರಾಜೇಶ್ವರಿ, ಪ್ರತಿಭಾ ಗೋನಾಳ ಇದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್