ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಂತಾಪ
ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಂತಾಪ
ರಾಯಚೂರು ಫೆ. 25 - ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ಹಠಾತ್ ನಿಧನಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ, ಜೀವನೋಪಾಯ ಇಲಾಖೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ತೀವ್ರ ಕಂಬನಿ ಮಿಡಿದಿದ್ದಾರೆ.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದ ಅವರ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಸಂತಾಪ ಸೂಚಿಸಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿ,ಸುರಪುರ ಕ್ಷೇತ್ರದ ಅಭಿವೃದ್ಧಿಗೆ ತಮ್ಮದೆಯಾದ ಕನಸು ಕಂಡಿದ್ದರು.ಅವರ ಕಂಡ ಕನಸು ಈಡೇರುವ ಮೊದಲೇ ಇಹಲೋಕ ತ್ಯಜಿಸಿದ್ದು,ವೈಯಕ್ತಿಕವಾಗಿ ನನಗೆ ನಮ್ಮ ಕುಟುಂಬದ ಸದಸ್ಯರನ್ನೇ ಕಳೆದುಕೊಂಡಷ್ಟೇ ನೋವು ಉಂಟಾಗಿದೆ ಎಂದು ಹೇಳಿದ್ದಾರೆ.
ಕಲಬುರಗಿ- ಯಾದಗಿರಿ ಅವಳಿ ಜಿಲ್ಲೆಯ ಅಭಿವೃದ್ಧಿಯಲ್ಲಿ ತಮ್ಮದೇಯಾದ ಸೇವೆಯನ್ನು ಸಲ್ಲಿಸಿದ್ದ ಅವರು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಾಗಬೇಕು ಎಂಬ ಕನಸು ಕಂಡಿದ್ದರು. ಆದರೆ, ನಾನೊಂದು ಬಯಸಿದರೆ, ದೇವರು ಇನ್ನೊಂದು ಬಗೆದ ಎಂಬಂತಾಗಿದೆ ಎಂದು ಪಾಟೀಲ್ ಆಘಾತ ವ್ಯಕ್ತಪಡಿಸಿದ್ದಾರೆ.
ಅವರ ಪಕ್ಷ ನಿಷ್ಠೆ, ಹಿರಿತನವನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷ ಇತ್ತೀಚೆಗಷ್ಟೆ ಅವರನ್ನು ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ಆದರೆ, ಅಧಿಕಾರ ಅನುಭಸುವ ಮೊದಲೇ ಇಹಲೋಕ ತ್ಯಜಿಸಿದ್ದು ನಮಗೆಲ್ಲರಿಗೂ ಆಪಾರ ನೋವು ಉಂಟು ಮಾಡಿದೆ ಎಂದು ಹೇಳಿದ್ದಾರೆ.
ಮನೆಯ ಯಾಜಮಾನನ್ನು ಕಳೆದುಕೊಂಡು ದುಃಖದಲ್ಲಿರುವ ರಾಜವೆಂಕಟಪ್ಪ ನಾಯಕ್ ಕುಟುಂಬದವರಿಗೆ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಚಿವ ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
Comments
Post a Comment