ಜಿಲ್ಲಾಡಳಿತದಿಂದ ಸರಳ ರೀತಿಯಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ

 


ಜಿಲ್ಲಾಡಳಿತದಿಂದ ಸರಳ ರೀತಿಯಲ್ಲಿ ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ


ರಾಯಚೂರು,ಮಾ.23- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಇಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಗದ್ಗುರು ರೇಣುಕಾಚಾರ್ಯ ಅವರ ಭಾವಚಿತ್ರಕ್ಕೆ ಮಾಲರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಸರಳ ರೀತಿಯಲ್ಲಿ ಆಚರಿಸಲಾಯಿತು. 


ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಹಾಯಕ ಆಯುಕ್ತ ಎಸ್.ಎಸ್ ಸಂಪಗಾವಿ, ತಹಶೀಲ್ದಾರ್ ಸುರೇಶ ವರ್ಮಾ,  ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ.ವೆಂ ನಾಯಕ, ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಸೋಮವಾರಪೇಟೆ ಮಠದ ಅಭಿನವ ವೀರ ರಾಚೋಟಿ ಶಿವಾಚಾರ್ಯ ಸ್ವಾಮೀಜಿ, ಮಂಗಳವಾರ ಪೇಟೆ ಮಠದ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಮಾಜದ ಮುಖಂಡರಾದ ಶರಣಭೂಪಾಲ ನಾಡಗೌಡ, ರಾಚನಗೌಡ, ಪ್ರಭುರಾಜ, ವೀರಯ್ಯ ಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್