ಬೋಳಮಾನ್ ದೊಡ್ಡಿ ತಿಮ್ಮಪ್ಪ ದೇವಸ್ಥಾನಕ್ಕೆ ಸಚಿವರ ಭೇಟಿ: ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಸಚಿವ ಎನ್ ಎಸ್ ಬೋಸರಾಜು
ಬೋಳಮಾನ್ ದೊಡ್ಡಿ ತಿಮ್ಮಪ್ಪ ದೇವಸ್ಥಾನಕ್ಕೆ ಸಚಿವರ ಭೇಟಿ:
ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಸಚಿವ ಎನ್ ಎಸ್ ಬೋಸರಾಜು
ರಾಯಚೂರು,ಮಾ.28- ಬೋಳಮಾನ್ ದೊಡ್ಡಿಯಲ್ಲಿರುವ ಬೋಳಬಂಡಿ ತಿಮ್ಮಪ್ಪ ದೇವಸ್ಥಾನಕ್ಕೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಬೋಳ ಬಂಡೆ ತಿಮ್ಮಪ್ಪ ದೇವಸ್ಥಾನ ಸಮಿತಿ ವತಿಯಿಂದ ಸಚಿವರಿಗೆ ಸನ್ಮಾನಿಸಿ ಗೌರವಿಸಿದರು.
ಕಾಂಗ್ರೆಸ್ ಮುಖಂಡರಾದ ಜಯಣ್ಣ, ಕೆ ಶಾಂತಪ್ಪ, ರುದ್ರಪ್ಪ ಅಂಗಡಿ, ಜಿ ಶಿವಮೂರ್ತಿ, ನರಸಿಂಹಲು ಮಾಡಗಿರಿ, ಕುರುಬ ದೊಡ್ಡಿ ಆಂಜನೇಯ, ತಿಮ್ಮಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Comments
Post a Comment