ಲೋಕಸಭಾ ಅಭ್ಯರ್ಥಿ ಜಿ.ಕುಮಾರ ನಾಯಕ ನಾಳೆ ನಗರಕ್ಕೆ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮುಖಂಡರ ಸಭೆ: ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ - ಎನ್ಎಸ್ ಬೋಸರಾಜು
ಲೋಕಸಭಾ ಅಭ್ಯರ್ಥಿ ಜಿ.ಕುಮಾರ ನಾಯಕ ನಾಳೆ ನಗರಕ್ಕೆ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮುಖಂಡರ ಸಭೆ:
ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ - ಎನ್ಎಸ್ ಬೋಸರಾಜು
ರಾಯಚೂರು,ಮಾ.29-ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡುವ ಮೂಲಕ ರಾಯಚೂರು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾದ ಜಿ ಕುಮಾರ್ ನಾಯಕ್ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ತಿಳಿಸಿದರು.
ಅವರಿಂದು ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಗರ ವಿಧಾನಸಭೆ ಕ್ಷೇತ್ರದ ಪ್ರಮುಖ ಮುಖಂಡರ ಸಭೆಯಲ್ಲಿ ಮಾತನಾಡಿದರು.
ರಾಯಚೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ ಕುಮಾರ ನಾಯಕ್ ಅವರು ಮೊದಲ ಬಾರಿಗೆ ರಾಯಚೂರು ನಗರಕ್ಕೆ ಆಗಮಿಸಲಿದ್ದು ಅವರನ್ನು ಗೌರವಪೂರ್ವಕವಾಗಿ ಬರಮಾಡಿಕೊಳ್ಳಬೇಕು ಎಂದರು.
ಶನಿವಾರ 11- 30 ಕ್ಕೆ ಪಕ್ಷದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆಯುವ ಪಕ್ಷ ಮುಖಂಡರ ಸಭೆಗೆ ಎಲ್ಲರು ಭಾಗವಹಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜ ರೆಡ್ಡಿ, ಕುರಬದೊಡ್ಡಿ ಆಂಜನೇಯ್ಯ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮೊಹ್ಮದ್ ಶಾಲಂ, ಜಯಣ್ಣ, ಕೆ ಶಾಂತಪ್ಪ, ನರಸಿಂಹಲು ಮಾಡಗಿರಿ, ರಾಜಶೇಖರ್ ರಾಮಸ್ವಾಮಿ, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಬಿ ರಮೇಶ್, ಶ್ರೀನಿವಾಸ ರೆಡ್ಡಿ, ಮಲ್ಲಿಕಾರ್ಜುನ್ ಏಗನೂರು, ಶೇಖರ್ ರೆಡ್ಡಿ, ಫಿರೋಜ್ ಖಾನ್, ಮುನಿಸ್ವಾಮಿ, ಮಲ್ಲೇಶ ಕೊಲಮಿ, ಹರಿಬಾಬು, ವಾಹಿದ್, ಗೋವಿಂದರಡ್ಡಿ, ಅಮಿತ್, ಹನುಮಂತ ಹೊಸೂರು ಸೇರಿದಂತೆ ಅನೇಕರು ಇದ್ದರು.
Comments
Post a Comment