ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ: ಜಿಲ್ಲೆಯಲ್ಲಿ 30228 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು


 ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ: ಜಿಲ್ಲೆಯಲ್ಲಿ 30228  ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು

ರಾಯಚೂರು,ಮಾ.೨೫- ಜಿಲ್ಲೆಯ ೯೩ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸುಸೂತ್ರವಾಗಿ ಜರುಗಿದ್ದು, ಜಿಲ್ಲೆಯಲ್ಲಿ ಮಾ.೨೫ರಂದು ಪ್ರಥಮ ಭಾಷೆ ಪತ್ರಿಕೆಯ ವಿಷಯಕ್ಕೆ ಪರೀಕ್ಷೆ ನಡೆದಿದ್ದು, ಈ ಪರೀಕ್ಷೆಗೆ ಒಟ್ಟು ೩೦೨೨೮ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಉಳಿದಂತೆ ೮೭೧ ವಿದ್ಯಾರ್ಥಿಗಳು ಗೈರಾಗಿದ್ದಾರೆ.


ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ೪೧೮೬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೭೫ ವಿದ್ಯಾರ್ಥಿಗಳು ಗೂರಾಗಿದ್ದಾರೆ,  ಲಿಂಗಸುಗೂರು ತಾಲೂಕಿನಲ್ಲಿ ೬೨೪೧ ಹಾಜರು ೧೫೩ ವಿದ್ಯಾರ್ಥಿಗಳು ಗೈರಾಗಿದ್ದಾರೆ, ಮಾನವಿ ತಾಲೂಕಿನಲ್ಲಿ ೫೫೬೮ ವಿದ್ಯಾರ್ಥಿಗಳು ಹಾಜರು ಹಾಗೂ ೧೮೪ ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಯಚೂರು ತಾಲೂಕಿನಲ್ಲಿ ೮೬೪೫ ಹಾಜರಾಗಿದ್ದರೆ ೩೦೦ ವಿದ್ಯಾರ್ಥಿಗಳು ಗೈರಾಗಿದ್ದಾರೆ ಹಾಗೂ ಸಿಂಧನೂರು ತಾಲೂಕಿನಲ್ಲಿ ೫೫೮೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಉಳಿದಂತೆ ೧೫೯ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ