ನಾಮಪತ್ರ ಸಲ್ಲಿಕೆ ವೇಳೆ ಬಿ. ವೈ ವಿಜಯೇಂದ್ರ ಆಗಮನ- ರಾಜಾ ಅಮರೇಶ್ವರ ನಾಯಕ

 


ನಾಮಪತ್ರ ಸಲ್ಲಿಕೆ ವೇಳೆ ಬಿ. ವೈ ವಿಜಯೇಂದ್ರ ಆಗಮನ-ರಾಜಾ ಅಮರೇಶ್ವರ ನಾಯಕ

ರಾಯಚೂರು, ಮಾ.31- ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ದಿನದಂದು ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ಆಗಮಿಸಲಿದ್ದಾರೆ ಎಂದು ಹಾಲಿ ಸಂಸದ ರಾಜಾ ಅಮರೇಶ ನಾಯಕ ಅವರು ಹೇಳಿದರು. ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆ ಭಾರೀ ಕುತೂಹಲ ಮೂಡಿಸಿತ್ತು. ಆದರೆ ರಾಜ್ಯಾಧ್ಯಕ್ಷ ಬಿ.ವೈ  ವಿಜಯೇಂದ್ರ ಅವರ ನಿರ್ದೇಶನ ಮೇರೆಗೆ ಹೈಕಮಾಂಡ್ ನನ್ನ ಮೇಲೆ ವಿಶ್ವಾಸದಿಂದ ಟಿಕೆಟ್ ನೀಡಿದೆ. ಲೋಕಸಭಾ ಚುನಾವಣೆ ಹಿನ್ನಲೆ ನಾಮಪತ್ರ ಸಲ್ಲಿಕೆ ಮಾಡುವ ದಿನದಂದು ಬಿ. ವೈ ವಿಜಯೇಂದ್ರ ನಾಯಕತ್ವದಲ್ಲಿ ಸಾವಿರ ಸಂಖ್ಯೆಯ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಲಾಗುವುದು ಎಂದರು. ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಗುರಿ.


ಈ ಹಿನ್ನಲೆ ಚುನಾವಣೆ ಸಂದರ್ಭದಲ್ಲಿ ಕಾರ್ಯಕರ್ತರು ತಮ್ಮನ್ನು ಬಹುಮತದ ಅಂತರದಲ್ಲಿ ಗೆಲ್ಲುಸುವಂತೆ ಮನವಿ ಮಾಡಿಕೊಂಡರು. ಲೋಕಸಭಾ ಚುನಾವಣೆ ಅತ್ಯಂತ ಮಹತ್ವ ಮತ್ತು ದೇಶದ ಭವಿಷ್ಯ ನಿರ್ಧಾರ ಮಾಡುವ ಚುನಾವಣೆ. ಈ ನಿಟ್ಟಿನಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಕ್ಷೇತ್ರದಲ್ಲಿ ತಮ್ಮನ್ನು ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು. ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮೋದಿ ದೇಶಕ್ಕೆ ಅವಶ್ಯ. ಪ್ರತಿಯೊಬ್ಬ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ತಮ್ಮ ಗೆಲು ವಿಗೆ ಸಂಕಲ್ಪ ಮಾಡಬೇಕು ಎಂದರು
.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ