ಲೋಕಸಭೆ ಚುನಾವಣೆ: ಚೆಕ್ ಪೋಸ್ಟ್ ಗಳಿಗೆ ಡಿಸಿ, ಸಿಇಒ, ಎಸ್ಪಿ ಭೇಟಿ

 


ಲೋಕಸಭೆ ಚುನಾವಣೆ:
ಚೆಕ್ ಪೋಸ್ಟ್ ಗಳಿಗೆ ಡಿಸಿ, ಸಿಇಒ, ಎಸ್ಪಿ ಭೇಟಿ

ರಾಯಚೂರು,ಮಾ.೨೫- ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ರಾಯಚೂರು ತಾಲೂಕಿನ ವಿವಿಧ ಗಡಿಭಾಗದ ಗ್ರಾಮಗಳಲ್ಲಿ ಸ್ಥಾಪಸಿರುವ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕರಾಂ ಪಾಂಡ್ವೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರು ಭೇಟಿ ನೀಡಿ ಪರಿಶೀಲಿಸಿದರು. 

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನಗರದ ಲಿಂಗಸೂಗೂರು ರಸ್ತೆ ಬೈಪಾಸ್ ಬಳಿ, ಶಕ್ತಿನಗರ, ಚಂದ್ರಬoಡಾ, ಸಿಂಗನೋಡಿ, ಯರಗೇರಾ, ಕೊತ್ತದೊಡ್ಡಿ ,ಗಿಲೇಸೂಗೂರು/ಯರಗೇರಾ ಗಡಿಭಾಗದಲ್ಲಿ ಸ್ಥಾಪಿಸಲಾದ ಸ್ಥಾಯೀ ಕಣ್ಗಾವಲು ತಂಡಗಳಚೆಕ್ ಪೋಸ್ಟಗಳಿಗೆ ಅನೀರಿಕ್ಷಿತ ಭೇಟಿ ನೀಡಿ ವಾಹನಗಳ ತಪಾಸಣಾ ಕಾರ್ಯಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.


 ಇಂದಿನಿoದ ೨೦೨೪ ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ರಾಯಚೂರು ನಗರದ ವಿಜ್ಞಾನ ಶಾಲೆ, ಚಂದ್ರಬoಡಾ ಸರ್ಕಾರಿ ಪ್ರೌಢಶಾಲೆ ಮತ್ತು ಸಿಂಗನೋಡಿ ಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ನಕಲು / ಅಕ್ರಮ ತಡೆ ಬಗ್ಗೆ ಪರಿಶೀಲನೆ ನಡೆಸಲಾಯಿತು. ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಿ ಯಶಸ್ವಿಗೊಳಿಸುವಂತೆ ಪರೀಕ್ಷಾ  ಕೇಂದ್ರದ ಅಧಿಕಾರಿಗಳಿಗೆ ಸೂಚಿಸಲಾಯಿತು. 

ಅಲ್ಲದೇ ನಗರದ ಜಿಲ್ಲಾ ಪಂಚಾಯತನಲ್ಲಿರುವ ಕೆಸ್ವಾನ್ ನಲ್ಲಿ ರಾಯಚೂರು ಜಿಲ್ಲೆಯ  ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ವೆಬ್ ಕಾಸ್ಟಿಂಗ್ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು  ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವೀಕ್ಷಣೆ ಮಾಡಿದರು.



Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ