ರಾಯಚೂರು ಲೋಕಸಭಾ ಕ್ಷೇತ್ರ: ರಾಜಾ ಅಮರೇಶ್ವರ ನಾಯಕಗೆ ಬಿಜೆಪಿ ಟಿಕೆಟ್ ಘೋಷಣೆ.
ರಾಯಚೂರು ಲೋಕಸಭಾ ಕ್ಷೇತ್ರ: ರಾಜಾ ಅಮರೇಶ್ವರ ನಾಯಕಗೆ ಬಿಜೆಪಿ ಟಿಕೆಟ್ ಘೋಷಣೆ. ರಾಯಚೂರು,ಮಾ.24- ತೀವ್ರ ಕುತೂಹಲ ಕೆರಳಿಸಿದ್ದ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಪಡೆಯುವಲ್ಲಿ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಯಶಸ್ವಿಯಾಗಿದ್ದಾರೆ.
ಮೊದಲ ಪಟ್ಟಿಯಲ್ಲಿ ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಹೆಸರು ಘೋಷಿಸದ ಬಿಜೆಪಿ ಹೈಕಮಾಂಡ್ ಇದೀಗ ತನ್ನ 5ನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ರಾಜಾ ಅಮರೇಶ್ವರ ನಾಯಕ ಹೆಸರು ಅಂತಿಮಗೊಳಿಸಿದ್ದು ಮತ್ತೋರ್ವ ಆಕಾಂಕ್ಷಿ ಬಿ.ವಿ.ನಾಯಕ ಟಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದು ಅದೆ ರೀತಿ ಟಿಕೆಟ್ ಆಕಾಂಕ್ಷಿಗಳ ರೇಸ್ ನಲ್ಲಿದ್ದ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರರಿಗೂ ಟಿಕೆಟ್ ಮಿಸ್ ಆಗಿದೆ. ಎರಡನೆ ಬಾರಿಗೆ ಲೋಕಸಭಾ ಚುನಾವಣೆ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಸೆಣಸಾಟ ನಡೆಸಲಿದ್ದಾರೆ. ಎರೆಡು ರಾಷ್ಟ್ರೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದು ರಾಜ್ಯದಲ್ಲಿ ಬಿಜೆಪಿಗೆ ಜೆಡಿಎಸ್ ಸಪೋರ್ಟ್ ಮಾಡಿದ್ದು ಚುನಾವಣಾ ಕಣ ಇಂದು ಹೋಳಿ ಹುಣ್ಣಿಮೆಯಿಂದಲೆ ರಂಗೇರಲಿದೆ.
Comments
Post a Comment