ಕೆಪಿಸಿಸಿ ಕಾರ್ಯಧ್ಯಕ್ಷರಾಗಿ ಎ.ವಸಂತಕುಮಾರ ನೇಮಕ.
ಕೆಪಿಸಿಸಿ ಕಾರ್ಯಧ್ಯಕ್ಷರಾಗಿ ಎ.ವಸಂತಕುಮಾರ ನೇಮಕ. ರಾಯಚೂರು,ಮಾ.23- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಧ್ಯಕ್ಷರಾಗಿ ಎ.ವಸಂತಕುಮಾರ ನೇಮಕವಾಗಿದ್ದಾರೆ.ಎಐಸಿಸಿ ಅಧ್ಯಕ್ಷರ ಅಪ್ಪಣೆ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣಿಗೋಪಾಲ ಈ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಇವರನ್ನು ಕಲ್ಯಾಣ ಕರ್ನಾಟಕ ಜಿಲ್ಲೆಗಳ ಕೆಪಿಸಿಸಿ ಕಾರ್ಯಕ್ರಮ ಅನುಷ್ಠಾನ ಉಸ್ತುವಾರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನೇಮಕ ಮಾಡಿದ್ದಾರೆ .
ಎ.ವಸಂತಕುಮಾರ ಅವರ ಸಂಕ್ಷಿಪ್ತ ಮಾಹಿತಿ: ದಿ.19-05-1963 ರಂದು ರಾಯಚೂರಿನಲ್ಲಿ ಜನಿಸಿದ್ದು, ಇವರ ತಂದೆ ಆರ್.ಆಂಜನೇಯಲು ರಾಯಚೂರು ನಗರಸಭೆ ಅಧ್ಯಕ್ಷರಾಗಿ, ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.
ಅದರಂತೆ ಎ.ವಸಂತಕುಮಾರ ಅವರು 1986-90ರ ವರೆಗೆ ಎನ್.ಎಸ್.ಯು.ಐ. ಪ್ರಧಾನ ಕಾರ್ಯದರ್ಶಿಯಾಗಿ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ 1990-1996 ರ ವರೆಗೆ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಿ 1996-2001ರ ವರೆಗೆ ಕಾರ್ಯನಿರ್ವಸಿದ್ದಾರೆ.
2001ರಿಂದ 2006ರ ವರೆಗೆ ರಾಯಚೂರು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, 2006-17ರ ವರೆಗೆ ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
2017-2024ರ ವರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಅಲ್ಲದೆ, ರಾಯಚೂರು ನಗರಸಭೆ ಸದಸ್ಯರಾಗಿ ಮೂರು ಅವಧಿಗೆ ಕಾರ್ಯನಿರ್ವಹಿಸಿದ್ದಾರೆ. ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ತುಂಗಭದ್ರಾ ಕಾಡಾ ಅಧ್ಯಕ್ಷರಾಗಿ ಸಹ ಸೇವೆ ಸಲ್ಲಿಸಿದ್ದಾರೆ.
Comments
Post a Comment