ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ್ ನಾಯಕ ಸಾಂಕೇತಿಕ ನಾಮಪತ್ರ ಸಲ್ಲಿಕೆ : ಏಪ್ರಿಲ್ 18 ಕ್ಕೆ ಬೃಹತ್ ರ್ಯಾಲಿಯೊಂದಿಗೆ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಕೆ
ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ್ ನಾಯಕ ಸಾಂಕೇತಿಕ ನಾಮಪತ್ರ ಸಲ್ಲಿಕೆ :
ಏಪ್ರಿಲ್ 18 ಕ್ಕೆ ಬೃಹತ್ ರ್ಯಾಲಿಯೊಂದಿಗೆ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಕೆ
ರಾಯಚೂರು,ಏ.15- ರಾಯಚೂರು - ಯಾದಗಿರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ರಾಜಾ ಅಮರೇಶ್ವರ ನಾಯಕರವರು ಇಂದು ಚುನಾವಣಾ ಅಧಿಕಾರಿಗಳಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಅವರಿಂದು ಜಿಲ್ಲಾಧಿಕಾರಿ ಕಛೇರಿಯಲ್ಲಿಂದು ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಚಂದ್ರಶೇಖರ ನಾಯಕ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದವರು ನಮ್ಮ ಮನೆದೇವರದಾದ ಗುರುಗುಂಟಾ ಶ್ರೀ ಅಮರೇಶ್ವರ ದೇವರ ದಿನವಾದ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸುತ್ತಿದ್ದು , ಏಪ್ರಿಲ್ 18 ರಂದು ಎರಡನೇ ಬಾರಿಗೆ ಬಿಜೆಪಿ - ಜೆಡಿಎಸ್ ಪಕ್ಷಗಳ ರಾಜ್ಯದ ಮುಖಂಡರೊಂದಿಗೆ ಹಾಗೂ ಸಮಸ್ತ ಕಾರ್ಯಕರ್ತರೊಂದಿಗೆ , ಜನತೆಯೊಂದಿಗೆ ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ಉಮೇದುವಾರಿಕೆ ಸಲ್ಲಿಸುವುದಾಗಿ ತಿಳಿಸಿದರು.
ಅಂದು ಕೇಂದ್ರ ಸಚಿವರಾದ ನಾರಾಯಣಸ್ವಾಮಿ, ಪಕ್ಷದ ನಾಯಕರಾದ ಜನಾರ್ಧನರೆಡ್ಡಿ ಸೇರಿದಂತೆ ರಾಯಚೂರು - ಯಾದಗಿರಿ ಲೋಕಸಭಾ ಕ್ಷೇತ್ರದ ಪ್ರಮುಖ ಮುಖಂಡರು , ಕಾರ್ಯಕರ್ತರೊಂದಿಗೆ ಏಪ್ರಿಲ್ 18 ಕ್ಕೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ರಾಜಾನವುಷನಾಯಕ್ , ರಾಘವೇಂದ್ರ ಚೂಡಾಮಣಿ, ಹುಲ್ಲೇಶ್ ಸಾಹುಕಾರ್, ಜೆಡಿಎಸ್ ಮುಖಂಡರಾದ ನಿಜಾಮುದ್ದೀನ್ ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು
Comments
Post a Comment