ದ್ಪಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ಜಿಲ್ಲೆಯಾದ್ಯಂತ ಶೇ.67.99ರಷ್ಟು ವಿದ್ಯಾರ್ಥಿಗಳು ತೇರ್ಗಡೆ


ದ್ವಿತೀಯ ಪಿಯುಸಿ  ಪರೀಕ್ಷೆ ಫಲಿತಾಂಶ: 
               ಜಿಲ್ಲೆಯಾದ್ಯಂತ ಶೇ.67.99ರಷ್ಟು ವಿದ್ಯಾರ್ಥಿಗಳು ತೇರ್ಗಡೆ


ರಾಯಚೂರು,ಏ.10- ದ್ವಿತೀಯ ಪಿಯುಸಿ ಅಂತಿಮ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 21,219 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ ಒಟ್ಟು 14,427 ಅಭ್ಯರ್ಥಿಗಳು ಉತ್ತೀರ್ಣಗಿದ್ದಾರೆ. ಈ


ಮೂಲಕ ಜಿಲ್ಲೆಯಲ್ಲಿ ಶೇ.67.99ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 13,273 ಹೊಸದಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 323 ಖಾಸಗಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಮತ್ತು 831 ಪುನರಾವರ್ತಿತ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಕಲಾ ವಿಭಾಗದಿಂದ ಒಟ್ಟು 12,251 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ ಒಟ್ಟು 7,230 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಶೇ.59.02ರಷ್ಟು ವಿದ್ಯಾರ್ಥಿಗಳು ಕಲಾ ವಿಭಾದಲ್ಲಿ ತೇರ್ಗಡೆಯಾಗಿದ್ದಾರೆ.

ವಾಣಿಜ್ಯ ವಿಭಾಗದಿಂದ ಒಟ್ಟು 4,149 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ ಒಟ್ಟು 2,917 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ ಶೇ.70.31 ರಷ್ಟು ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.


ವಿಜ್ಞಾನ ವಿಭಾಗದಿಂದ ಒಟ್ಟು 4,819 ವಿದ್ಯಾರ್ಥಿಗಳ ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 4,280 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಶೇ.88.82ರಷ್ಟು ವಿದ್ಯಾರ್ಥಿಗಳು ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.

ಜಿಲ್ಲೆಯಾದ್ಯಂತ 6,421 ಪುರುಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾದರೆ 8,006 ವಿದ್ಯಾರ್ಥಿನಿಯರು ಉತ್ತೀರ್ಣರಾಗುವ ಮೂಲಕ ಪರೀಕ್ಷೆಯಲ್ಲಿ ಮೇಲುಗೈ ಸಾಧಿಸಿದ್ದಾರೆ.

ನಗರ ಭಾಗದ 11,164 ವಿದ್ಯಾರ್ಥಿಗಳು ಈ ಬಾರಿಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟು 3,263 ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್