ಜಿಲ್ಲಾಡಳಿತದಿಂದ ಸರಳ ರೀತಿಯಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆ :ದೇವರ ದಾಸಿಮಯ್ಯ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಿ- ತಹಶೀಲ್ದಾರ ಸುರೇಶ ವರ್ಮಾ
ಜಿಲ್ಲಾಡಳಿತದಿಂದ ಸರಳ ರೀತಿಯಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆ:
ದೇವರ ದಾಸಿಮಯ್ಯ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಿ- ಸುರೇಶ ವರ್ಮಾ
ರಾಯಚೂರು,ಏ.13- ದೇವರ ದಾಸಿಮಯ್ಯ ಅವರು ತಮ್ಮ ವಚನಗಳ ಮೂಲಕ ಲೋಕದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವ
ಮೂಲಕ ಸಮಾಜದಲಿ ಉತ್ತಮ ನಾಗರಿಕರಾಗಬೇಕು ಎಂದು ರಾಯಚೂರು ತಹಶೀಲ್ದಾರ ಸುರೇಶ ವರ್ಮಾ ಅವರು ಹೇಳಿದರು.
ಅವರು ಏ.13 ರಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ದೇವರ ದಾಸಿಮಯ್ಯ ಜಯಂತಿ ಸರಳ ಆಚರಣೆ ಕಾರ್ಯಕ್ರಮದಲ್ಲಿ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿs ಮಾತನಾಡಿದರು.
ದೇವರ ದಾಸಿಮಯ್ಯ ತಮ್ಮ ಕಾಯಕದ ಜೊತೆಗೆ ತಮ್ಮ ಶ್ರೇಷ್ಠ ವಚನಗಳ ಮೂಲಕ ಸಮ ನಿರ್ಮಾಣ ಮಾಡುವಲ್ಲಿ ಅತ್ಯಂತ ಮುಂಚೂಣಿಯಲ್ಲಿರುವ ವಚನಕಾರರಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿ ಪ್ರತಿಯೊಬ್ಬರು ನಡೆದಾಗ ಮಾತ್ರ ಅವರ ಜಯಂತಿ ಆಚರಣೆಗೆ ಸಾರ್ಥಕತೆ ಸಿಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಇಸ್ಮಾಯಿಲ್, ಕನ್ನಡ ಸಾಹಿತ್ಯ ಪರಿಷತ್ ಸಹ ಜಿಲ್ಲಾ ಕಾರ್ಯದರ್ಶಿ ದಂಡಪ್ಪ ಬಿರಾದಾರ, ಸಮಾಜದ ಮುಖಂಡರಾದ ಜಿ.ನಾಗರಾಜ, ಮಲ್ಲಿಕಾರ್ಜುನ, ಈರಣ್ಣ ಕರ್ಲಿ, ಉದಯಕುಮಾರ, ಪುಷ್ಪ, ಗೂಳಿಗೌಡ, ಬಸವರಾಜ ಕಾಂಚನಂ, ಗದ್ದಿ ಸೂರ್ಯನಾರಾಯಣ, ಮಲ್ಲಿಕಾರ್ಜುನ ಕಂಪ್ಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Comments
Post a Comment