ಜಿಲ್ಲಾಡಳಿತದಿಂದ ಸರಳ ರೀತಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ: ಡಾ.ಬಿ.ಆರ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು-ಡಿ.ಸಿ ಎಲ್.ಚಂದ್ರಶೇಖರ ನಾಯಕ
ಜಿಲ್ಲಾಡಳಿತದಿಂದ ಸರಳ ರೀತಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ:
ಡಾ.ಬಿ.ಆರ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು-ಡಿ.ಸಿ ಎಲ್.ಚಂದ್ರಶೇಖರ ನಾಯಕ
ರಾಯಚೂರು,ಏ.14 -ಸಂವಿಧಾನ ರಚನೆಯಲ್ಲಿ ಡಾ.ಬಿಆರ್ ಅಂಬೇಡ್ಕರ್ ಅವರ ಕೊಡುಗೆ ಹಾಗು ಶ್ರಮ ಅಪಾರವಾಗಿದ್ದು, ಅವರು ಹಾಕಿಕೊಟ್ಟ ಮಾಗದಲ್ಲಿ ನಡೆದಾಗ ಮಾತ್ರ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಹೇಳಿದರು.
ಅವರಿಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಡಾ.ಬಿ.ಆರ್ ಅಂಬೇಡ್ಕರ್ ಅವರು ದೇಶದಲ್ಲಿ ಸಮಾನತೆಯನ್ನು ಸಾರಿ, ಸಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಸಾಕಷ್ಟು ಶ್ರಮ ಪಟ್ಟಿದ್ದಾರೆ. ಜೊತೆಗೆ ಸಂವಿಧಾನವನ್ನು ರಚನೆ ಮಾಡುವಲ್ಲಿ ಅವರ ಪಾತ್ರ ಅಪಾರವಾಗಿದ್ದು, ಅಂತಹ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ನಗರಸಭೆ ಪೌರಾಯುಕ್ತ ಜಿ.ಎನ್ ಚಲಪತಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಹೆ.ಟಿ ಪೋತೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರಾಜೇಂದ್ರ ಜಲ್ದಾರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಡಿ ಬಡಿಗೇರ, ಬೀದರ ಬುದ್ದ ವಿಹಾರದ ಪೂಜ್ಯ ಧಮ್ಮ ದೀಪ ದೇವನಾಂಪ್ರೀಯ ಸ್ವಾಮೀಜಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ: ಬೆಳಿಗ್ಗೆ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾಡಳಿತದಿಂದ ಮಾಲಾರ್ಪಣೆ ಮಾಡಲಾಯಿತು.
Comments
Post a Comment