ಹಂಚಿನಾಳ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಂದ ಲೋಕಸಭಾ ಚುನಾವಣೆ ಪ್ರಚಾರ
ಹಂಚಿನಾಳ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಂದ ಲೋಕಸಭಾ ಚುನಾವಣೆ ಪ್ರಚಾರ ರಾಯಚೂರು , ಏ.20-ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಂಚಿನಾಳ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಮಹಿಳೆಯರಿಗೆ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡುವಂತೆ ಕೋರಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.ವಸಂತಕುಮಾರ, ಶಾಸಕ ಬಸನಗೌಡ ದದ್ದಲ, ಮಾದ್ಯಮ ವಕ್ತಾರ ಡಾ.ರಝಾಕ ಉಸ್ತಾದ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.
Comments
Post a Comment