ಲೋಕಸಭಾ ಚುನಾವಣೆ: ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ: ವೆಚ್ಚ ವೀಕ್ಷಕ ಗುಂಜನಕುಮಾರ ವರ್ಮಾ

 


ಲೋಕಸಭಾ ಚುನಾವಣೆ: ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ- ವೆಚ್ಚ ವೀಕ್ಷಕ ಗುಂಜನಕುಮಾರ ವರ್ಮಾ 

ರಾಯಚೂರು,ಏ.14- ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಪ್ರತಿಯೊಂದು ಚುನಾವಣಾ ಘಟನೆಗಳ ಮೇಲೆ ನಿಗಾ ವಹಿಸಿ, ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದು ಚುನಾವಣಾ ವೆಚ್ಚ ವೀಕ್ಷಕರಾದ ಗುಂಜನಕುಮಾರ ಅವರು ಹೇಳಿದರು.

ಅವರಿಂದು ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾ ಕಾರ್ಯಕ್ಕೆ ನೇಮಕಗೊಂಡ ನೋಡಲ್‌ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿ, ಲೋಕಸಭಾ ಸಾರ್ವತ್ರಿಕ ಚುನಾ ವಣೆ ಸಂಬಂಧವಾಗಿ ಪ್ರತಿಯೊಂದು ಕಾರ್ಯಗಳನ್ನು ಪಾರದರ್ಶಕವಾಗಿ ನಿರ್ವಹಿಸಲಾಗುತ್ತದೆ. ಚುನಾವಣೆಗೆ ಸಂಬಂಧಿಸಿದ ಪ್ರತಿಯೊಂದು ಅಂಶ ಗಳನ್ನು ಸೂಕ್ಷ್ಮವಾಗಿ ವೀಕ್ಷಣೆ ಮಾಡ ಲಾಗುವುದು. ಹೀಗಾಗಿ ಅಭ್ಯರ್ಥಿಗಳು ವ್ಯಯಿಸುವ ಚುನಾವಣೆ ಖರ್ಚು- ವೆಚ್ಚಗಳ ಮೇಲೂ ನಿಗಾ ವಹಿಸಬೇಕು ಎಂದರು.


ಚುನಾವಣೆ ಪಾರದರ್ಶಕವಾಗಿ ನಡೆಯಲು ಸಹಾಯಕ ವೆಚ್ಚ ವೀಕ್ಷಕ ಅಧಿಕಾರಿಗಳು, ಎಫ್‌ಎಸ್‌ಟಿ, ಎಸ್ ಎಸ್‌ಟಿ ಮತ್ತು ವಿವಿಟಿ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಚೆಕ್‌ ಪೋಸ್ಟ್‌ಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಸೌಜನ್ಯಯುತವಾಗಿ ವರ್ತಿಸಿ, ಸಮರ್ಪಕ ತಪಾಸಣೆ ನಡೆಸಬೇಕು. ದಾಖಲೆ ರಹಿತ ಹಣ ಅಥವಾ ಇನ್ನಿತರೆ ವಸ್ತುಗಳು ಸಾಗಾಣಿಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಸೂಕ್ತ ದಾಖಲೆಯಿಲ್ಲದ 50 ಸಾವಿರಕ್ಕೂ ಹೆಚ್ಚಿನ ಹಣ ಹೊಂದಿದಲ್ಲಿ, ವಶಕ್ಕೆ ಪಡೆದು, ಸೂಕ್ತ ಕ್ರಮ ವಹಿಸಬೇಕು. 10 ಲಕ್ಷಕ್ಕೂ ಮೇಲ್ಪಟ್ಟು ಹಣ ದೊರೆತಲ್ಲಿ ಕೂಡಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು. ಅಲ್ಲದೆ ಕಡ್ಡಾಯವಾಗಿ ವಿಡಿಯೋ ಹಾಗೂ ಪಂಚನಾಮೆ ಪ್ರಕ್ರಿಯೆ ಕೈಗೊಳ್ಳಬೇಕು ಈ ಕುರಿತು ಯಾವುದೇ ಸಂಶಯವಿದ್ದಲ್ಲಿ ಚುನಾವಣೆ ವೆಚ್ಚ ವೀಕ್ಷಕರ ನೋಡೆಲ್ ಅಧಿಕಾರಿಗಳಿಗೆ ಸಂಪರ್ಕಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಲ್‌.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಮಾದರಿ ನೀತಿ ಸಂಹಿತೆ ನಿವರ್ಹಣಾ ತಂಡದ ನೋಡಲ್‌ ಅಧಿಕಾರಿ ರಾಹುಲ್‌ ತುಕಾರಾಮ ಪಾಂಡ್ವೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್.ಬಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Comments

Popular posts from this blog