ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮ ಪತ್ರ ಸಲ್ಲಿಕೆ ಭರಾಟೆ.


ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮ ಪತ್ರ ಸಲ್ಲಿಕೆ ಭರಾಟೆ.   
                                      ರಾಯಚೂರು,ಏ.18- ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಮುಖ ಪಕ್ಷಗಳ ಚುನಾವಣಾ ಕಣದಲ್ಲಿರುವ ಹುರಿಯಾಳುಗಳು ಇಂದು ಭಾರಿ ಜನಸ್ತೋಮದೊಂದಿಗೆ ಆಗಮಿಸಿ  ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಅತ್ತನೂರು ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ ಪೂರ್ವಭಾವಿ ಸಭೆ ಮಾಡಿದ ಬಿಜೆಪಿ ಪಕ್ಷದ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಂತರ ಪಕ್ಷದ ನಾಯಕರಾದ ಶಾಸಕ ಜನಾರ್ಧನರೆಡ್ಡಿ, ಎಂಎಲ್ಸಿ ಚೆಲುವಾದಿ ನಾರಾಯಣ ಸ್ವಾಮಿ, ಮಾಜಿ ಸಚಿವರಾದ ಕೆ.ಶಿವನಗೌಡ ನಾಯಕ, ವೆಂಕಟರಾವ್ ನಾಡಗೌಡ, ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶಿವರಾಜ ಪಾಟೀಲ್, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ತಿಪ್ಪರಾಜು ಹವಾಲ್ದಾರ್  ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರೂಪಾಕ್ಷಿ ಮುಂತಾದವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು.

ಅತ್ತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಾಜಿ‌ ಐಎಎಸ್ ಅಧಿಕಾರಿ ಜಿ.ಕುಮಾರ ನಾಯಕ ನಗರದ ಕರ್ನಾಟಕ ಸಂಘದಿಂದ ತೆರೆದ  ವಾಹನದಲ್ಲಿ ಭಾರಿ ಜನಸ್ತೂಮದೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು ಈ ಸಂದರ್ಭದಲ್ಲಿ ಸಚಿವರಾದ ಎನ್.ಎಸ್. ಬೋಸರಾಜು, ಶರಣ ಬಸಪ್ಪ ದರ್ಶನಾಪೂರು, ಶಾಸಕ ಬಸನಗೌಡ ದದ್ದಲ್
, ಕೆಪಿಸಿಸಿ ಕಾರ್ಯಾಧ್ಯಕ್ಷ ಎ.ವಸಂತ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ ಇನ್ನಿತರರು ಇದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ