
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಘಟಕದಿಂದ ಪ್ರತಿಭಾ ಪುರಸ್ಕಾರ, ವಿಪ್ರಶ್ರೀ ಪ್ರಶಸ್ತಿ ಪ್ರದಾನ ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ಉದ್ಘಾಟನೆ : ದೇಶದ ಅಭಿವೃದ್ಧಿಗೆ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರ -ಎ.ವಸಂತಕುಮಾರ ರಾಯಚೂರು,ಜೂ.30- ದೇಶದ ಅಭಿವೃದ್ಧಿಗೆ ಬ್ರಾಹ್ಮಣ ಸಮಾಜ ಅಪಾರ ಕೊಡುಗೆಯನ್ನು ನೀಡಿದೆ ಎಂದು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರಿಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಭಾನುವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಘಟಕದಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ, ವಿಪ್ರಶ್ರೀ ಪ್ರಶಸ್ತಿ ಪ್ರದಾನ ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶದಲ್ಲಿ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ಸಮಾಜದವಾಗಿದೆ. ಆದರೂ ಎಲ್ಲ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ್ದಾರೆ ಎಂದ ಅವರು ದೇವರಿಗೆ ಸಮೀಪ ಇರುವ ಬ್ರಾಹ್ಮಣ ಸಮಾಜವಾಗಿದೆ ಎಂದರು. ಸಮಾಜದಲ್ಲಿ ಬ್ರಾಹ್ಮಣ ಸಮಾಜ ಉನ್ನತ ಸ್ಥಾನ ಹೊಂದಿದೆ. ದೇಶದಲ್ಲಿ ಅನೇಕ ಉನ್ನತ ಮಟ್ಟದಲ್ಲಿ ಬ್ರಾಹ್ಮಣ ಸಮಾಜದವರೇ ಹೆಚ್ಚಾಗಿ ಕಂಡುಬರುತ್ತಾರೆ ಒಂದು ಸುಸಂಸ್ಕೃತವಾಗಿರುವ ಸಮಾಜವಾಗಿದೆ ಎಂದು ಹೇಳಿದರು. ದೇಶದ ಅಭಿವೃದ್ಧಿಗಾಗಿ ನೇರವಾಗಿ ಭಾಗಿಯಾಗದೇ ಇದ್ದರೂ ಪರೋಕ್ಷವಾಗಿ ಸಮಾಜದ ಪಾಲು ಇರುತ್ತದೆ. ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳಿಗೆ ...