ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ


 ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ

ರಾಯಚೂರು,ಜೂ.3- ತರಕಾರಿ ಬೆಳೆದು ನಗರಕ್ಕೆ ಮಾರಾಟ ಮಾಡಲು ಬರುವ  ರೈತರಿಗೆ ನಗರದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಸಾಮಾಜಿಕ ಹೋರಾಟಗಾರ ಅಂಬಾಜೀರಾವ್ ಒತ್ತಾಯಿಸಿದ್ದಾರೆ.

ಪ್ರತಿನಿತ್ಯ  ರಾಯಚೂರು ತಾಲೂಕು ವ್ಯಾಪ್ತಿಯ ನೂರಾರು ರೈತರು ತಮ್ಮ ಜಮೀನುಗಳಲ್ಲಿ ಬೆಳೆಯುವ ವಿವಿಧ ತರಕಾರಿಗಳನ್ನು ಮಾರಾಟ ಮಾಡಲು ನಗರ ಪ್ರದೇಶಕ್ಕೆ ಬರುತ್ತಿದ್ದಾರೆ. ತಮ್ಮ ಜೀವನ ನಿರ್ವಹಣೆಗೆ ತರಕಾರಿ ಮಾರಾಟವನ್ನು ಅವಲಂಬಿಸಿದ್ದಾರೆ. ಆದರೆ ಅವರಿಗೆ ನಗರದಲ್ಲಿ ತರಕಾರಿ ಮಾರಾಟ ಮಾಡುವ ಸ್ಥಳದಲ್ಲಿ ಯಾವುದೇ ಸೂಕ್ತ ವ್ಯವಸ್ಥೇ ಇಲ್ಲದಿರುವದಕ್ಕೆ ನಗರಸಭೆಗೆ ಒತ್ತಾಯಿಸಿದ್ದಾರೆ  .


ಈ ರೈತರು ತರಕಾರಿ ಮಾರಾಟ ಮಾಡುವ ಜಾಗದಲ್ಲಿ ಮಳೆ ಬಂದರೆ ನೀರು ನಿಲ್ಲುವುದರಿಂದ ವ್ಯಾಪಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ. ರಾಯಚೂರ ನಗರ ಸಭೆ ಅಧಿಕಾರಿಗಳಿಗಳು ಇದ್ದನ್ನು ಗಂಭೀರವಾಗಿ ಪರಿಗಣಿಸಿ ಹಳ್ಳಿಗಳಿಂದ ತರಕಾರ ಮಾರಾಟಕ್ಕೆ ಬರುವ ರೈತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಒತ್ತಾಯಿಸಿರುವ ಅವರು ಬೀದಿ ಬದಿಯ ಅಥಾವ ನಗರ ಪ್ರದೇಶಗಳಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಹಕ್ಕು ಬೆಳೆಗಾರರಿಗಿದೆ ಎಂದು ಅವರು ತಿಳಿಸಿದ್ದಾರೆ.


ಉಳಿದಂತೆ ನಗರದಲ್ಲಿವ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಬೇಕು, ಮತ್ತು ಅಂತಹ ಪ್ರದೇಶಗಳಲ್ಲಿ ಬಡ ರೈತರಿಗೆ ತರಕಾರಿ ಮಾರಾಟಕ್ಕ ವ್ಯವಸ್ಥೆ ಕಲ್ಪಿಸಬೇಕು ಒತ್ತುವರಿ ಆದ ರಾಜ ಕಾಲುವೆ ಜಾಗಗಳು ತೆರವುಗೊಳಿಸಿ, ನಗರದ ಮುಖ್ಯ ರಸ್ತೆಗಳಲ್ಲಿ ಬೀದಿ ದೀಪಗಳು ಅಳವಡಿಸಿ ಪ್ರತಿಯೊಂದು ವಾರ್ಡ್‌ಗಳಲ್ಲಿ ಮಳೆ ನೀರು ನಿಲ್ಲದೆ ಸುಗಮವಾಗಿ ಹರಿಯಲು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

 ನಗರ ಸಭೆ ಆಯುಕ್ತರು ನೀತಿ ಸಂಹಿತೆ,ನೆಪದಲ್ಲಿ ಕರ್ತವ್ಯದಿಂದ ಜಾರಿಕೊಳ್ಳುತ್ತಿದ್ದಾರೆ ಎಂದು ದೂರಿರುವ ಅವರು  ಚುನಾವಣೆ ನೀತಿ ಸಂಹಿತೆಯಿಂದ ನಗರ ಸ್ವಚ್ಛತೆಗೆಗಾಗಿ ಹಾಗೂ ಅನಧಿಕೃತ ಕಟ್ಟಡ ಗಳನ್ನು ತೆರವುಗೊಳಿಸಲು ಅಡ್ಡಿ ಬರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್