ನೂತನ ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ್ ರಿಂದ ಪ್ರಮಾಣ ವಚನ ಸ್ವೀಕಾರ. ರಾಯಚೂರು,ಜೂ.24- ನೂತನ ವಿಧಾನ ಪರಿಷತ್ ಸದಸ್ಯರಾದ ಎ.ವಸಂತ ಕುಮಾರ್ ರವರು ಇಂದು ಬೆಂಗಳೂರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಕಾನೂನು ಮತ್ತು ಸಂಸದೀಯ ಸಚಿವರಾದ ಹೆಚ್.ಕೆ.ಪಾಟೀಲ್ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಪಕ್ಷದ ಕಾರ್ಯಕರ್ತರು, ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ಇದ್ದರು.
Comments
Post a Comment