ಬಿಜೆಪಿ ಸರ್ಕಾರವಿದ್ದಾಗ ಬಡವರಿಗೆ ಒಂದು ಮನೆಯೂ ನಿರ್ಮಿಸಲಿಲ್ಲ:               

ದಲಿತರ ಹಣ ಗ್ಯಾರಂಟಿಗಳಿಗೆ ವಿನಿಯೋಗ ಬಿಜೆಪಿ ಕ್ಷುಲ್ಲಕ ರಾಜಕೀಯ- ಪ್ರಸಾದ ಅಬ್ಬಯ್ಯ.           ರಾಯಚೂರು,ಜು.30- ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೀಸಲಿಟ್ಟ ಹಣ ಐದು ಗ್ಯಾರಂಟಿಗಳಿಗೆ ವಿನಿಯೋಗಿಸಲಾಗುತ್ತಿದೆ ಎಂದು ಬಿಜೆಪಿ ಸುಳ್ಳು ಆರೋಪದ ಮೂಲಕ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಹೇಳಿದರು.                            ಅವರಿಂದು ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ  ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದೀನ ದಲಿತರ, ಶೋಷಿತರ ಪರವಾದ ಪಾರದರ್ಶಕ  ಆಡಳಿತ ನೀಡುತ್ತಿದೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕಾನೂನಿನಡಿ ಸಿಗಬೇಕಾದ ಅನುದಾನ ನೀಡುತ್ತಿದೆ ದೇಶದಲ್ಲೆ ಅತಿ ಹೆಚ್ಚು ಅನುದಾನ ದಲಿತರಿಗೆ ಮೀಸಲಿರಿಸಲಾಗಿದೆ ಅದಕ್ಕಾಗಿಯೆ ಶೇ.24 ರಷ್ಟು ಹಣ ಅವರಿಗೆ ವಿನಿಯೋಗಿಸಲಾಗುತ್ತಿದೆ ಎಂದರು. ಪಂಚ ಗ್ಯಾರಂಟಿಗಳಿಗೆ ಎಸ್ಸಿಪಿ ಟಿಎಸ್ಪಿ ಹಣ ಖರ್ಚು ಮಾಡಲಾಗುತ್ತಿದೆ ಎಂದು ಬಿಜೆಪಿ ಸುಳ್ಳು ಆರೋಪದ ಮಾಡುತ್ತಿದೆ ಎಂದು ದೂರಿದ ಅವರು ಬಿಜೆಪಿ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ ಎಂದರು. ಬಿಜೆಪಿ ಅವಧಿಯಲ್ಲಿ ಒಂದು ಮನೆ ನಿರ್ಮಾಣ ಮಾಡಲಿಲ್ಲ ನಮ್ಮ ಸರ್ಕಾರದಲ್ಲಿ  ವಸತಿ ಸಚಿವ ಜಮೀರ್ ಅಹ್ಮದ್ ರವರು ಸಿಎಂಗೆ ಮನವರಿಕೆ‌ಮಾಡಿ ಅತಿ ಹೆಚ್ಚು ಮನೆ ನಿರ್ಮಿಸುವ ಸಂಕಲ್ಪ ಮಾಡಿದ್ದಾರೆಂದ ಅವರು ಕೇಂದ್ರ ಸರ್ಕಾರ ಸ್ವಲ್ಪ ಹಣ ನೀಡಿ ಹೆಚ್ಚು ಪ್ರಚಾರ ಪಡೆಯುತ್ತಿದೆ ನಮ್ಮ ದುಡ್ಡು ಅವರ ನಾಮಫಲಕ ಮನೆಗಳ ಮುಂದೆ ಎಂದು ಲೇವಡಿ ಮಾಡಿದ ಅವರು ಸ್ಮಾರ್ಟ್ ಸಿಟಿ ಯೋಜನೆ ಮೂಲಕ ಸಿಂಗಾಪೂರ್ ಮಾಡುತ್ತೇವೆಂದು ಕೇಂದ್ರ ಸರ್ಕಾರ ಹಣ ಮಂಜೂರು ಮಾಡದೆ ಪ್ರಚಾರಕ್ಕೆ ಮಾತ್ರ ಸೀಮಿತವಾಗಿದೆ ಎಂದರು.


ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ದಲಿತರಿಗೆ ಹಣ‌ಮೀಸಲು ಮಾಡಲಿ ಎಂದು ಸವಾಲು ಮಾಡಿದ ಅವರು ದಲಿತರ ಬಗ್ಗೆ ಹುಸಿ ಪ್ರೀತಿ ಬಿಜೆಪಿ ತೋರಿಸುತ್ತದೆ ಎಂದರು. ಜಿಲ್ಲೆಯಲ್ಲಿರುವ ಕೊಳಚೆ ಪ್ರದೇಶಗಳ ಮಾಹಿತಿ ಪಡೆಯಲಾಗಿದ್ದು ಅಲ್ಲಿ  ಮನೆ ನಿರ್ಮಿಸದೆ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿರುವ ಗುತ್ತಿಗೆದಾರರು ಎಷ್ಟೆ ಪ್ರಭಾವಿಗಳಾಗಿದ್ದರು ಅವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದ ಅವರು ಅಧಿಕಾರಿಗಳು ಫಲಾನುಭವಿಗಳಿಗೆ ಮನೆ ನಿರ್ಮಿಸಲು ಗುತ್ತಿಗೆದಾರರೊಂದಿಗೆ ಶಾಮೀಲಾಗಿರುವ ಮಾಹಿತಿಯಿದ್ದು ಅಂತಹವರನ್ನು ಅಮಾನತ್ತು ಮಾಡಲಾಗುತ್ತದೆ ಕೊಳಚೆ ಮಂಡಳಿ ಆಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ನ್ಯೂನ್ಯತೆ ಸರಿಪಡಿಸಲು ಸೂಚಿಸಿದ್ದೆನೆಂದರು. ಮಾಜಿ ದೇವದಾಸಿ ಮಹಿಳೆಯರಿಗೆ ಮನೆ ನಿರ್ಮಾಣ ಕಾರ್ಯ ಯಾವ ಹಂತದಲ್ಲಿದೆ ಎಂಬುದರ ಬಗ್ಗೆ ಅಂಕಿಅಂಶ ಪಡೆದಿದ್ದು ಅವರಿಗೆ ಸೂರು ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದ ಅವರು ಕೊಳಚೆ ಪ್ರದೇಶಗಳಲ್ಲಿ ವಾಸ‌ ಮಾಡುವ ಜನರಿಗೆ ಕನಿಷ್ಟ ಮೂಲಭೂತ ಸೌಕರ್ಯ ಒದಗಿಸಲು ನನ್ನ ಅವಧಿಯಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆಂದರು. ಈ ಸಂದರ್ಭದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತರು , ಜಿಲ್ಲಾಧಿಕಾರಿಗಳು ಇದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ