ರಾಯಚೂರು ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಮಹತ್ವದ ಸಭೆ


ರಾಯಚೂರು ಆ. 23- ರಾಯಚೂರು ವಿಮಾನ ನಿಲ್ದಾಣ ಸ್ಥಾಪನೆ ಕುರಿತಂತೆ ಇಂದು  ವಿಧಾನ ಸೌಧದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು.                                     ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಲಾಯಿತು. ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಅನುಮತಿ ಪಡೆಯಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು.


ಸಭೆಯಲ್ಲಿ  ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ  ಡಾ. ಶರಣಪ್ರಕಾಶ್‌ ಪಾಟೀಲ್,  ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ  ಎಂ. ಬಿ. ಪಾಟೀಲ್‌, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು, ರಾಯಚೂರು ಸಂಸದರಾದ ಕುಮಾರ ನಾಯಕ್, ಮೂಲಭೂತ ಸೌಕರ್ಯ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ರಾದ ಖುಷ್ಬೂ ಚೌಧರಿ, ರಾಯಚೂರು ಜಿಲ್ಲಾಧಿಕಾರಿ ನಿತೀಶ್.ಕೆ  ಉಪಸ್ಥಿತರಿದ್ದರು.


Comments

Popular posts from this blog