ಪಕ್ಷಬೇಧ ಮೆರೆತು ನಗರಸಭೆ ಆಡಳಿತ ಸುಧಾರಣೆ- ಸಚಿವ ಬೋಸರಾಜು. ರಾಯಚೂರು,ಆ.28- ಕಾಂಗ್ರೆಸ್ ಪಕ್ಷ ನಗರಸಭೆಯಲ್ಲಿ ಅಧಿಕಾರ ಹಿಡಿದಿದ್ದು ಪಕ್ಷಬೇಧ ಮರೆತು ಎಲ್ಲರ ಸಹಕಾರದಿಂದ ನಗರಸಭೆ ಆಡಳಿತ ಸುಧಾರಣೆ ಮಾಡಲಾಗುತ್ತದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಅವರಿಂದು ನಗರಸಭೆ ಕಛೇರಿ ಸಭಾಂಗಣದಲ್ಲಿ ಅಧ್ಯಕ್ಷ ,ಉಪಾಧ್ಯಕ್ಷರ ಚುನಾವಣೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸುಮಾರು 13 ತಿಂಗಳ ಅವಧಿಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಸರ್ವೋಚ್ಚ ನ್ಯಾಯಾಲಯ ಮೀಸಲಾತಿ ಅನ್ವಯವಾಗಿದೆ ಮುಂದಿನ ದಿನಗಳಲ್ಲಿ ನಗರಸಭೆಯಲ್ಲಿ ಬದಲಾವಣೆ ತರಲಾಗುತ್ತದೆ ಎಂದ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಅನುದಾನ ಬಳಕೆ ಮಾಡಿಕೊಂಡು ವಿರೋಧ ಪಕ್ಷಗಳ ಸದಸ್ಯರನ್ನು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ನೂತನ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ ಹಾಗೂ ಉಪಾಧ್ಯಕ್ಷ ಸಾಜಿದ್ ಸಮೀರ್ ಕಾರ್ಯನಿರ್ವಹಿಸುತ್ತಾರೆ ಎಂದರು. ನಗರದಲ್ಲಿ ಸಮರ್ಪಕ ಮೂಲಭೂತ ಸೌಕರ್ಯ ದೊರೆಯುವಂತೆ ಮಾಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಸಂಸದ ಜಿ.ಕುಮಾರ ನಾಯಕ, ನರಸಮ್ಮ ಮಾಡಗಿರಿ, ಸಾಜಿದ್ ಸಮೀರ್, ಕೆ.ಶಾಂತಪ್ಪ, ಜಯಣ್ಣ, ಬಷೀರುದ್ದೀನ್, ಜಿಂದಪ್ಪ, ಎಂ.ಪವನ್ ಕುಮಾರ್,ದರೂರು ಬಸವರಾಜ,ರಮೇಶ್, ಇನ್ನಿತರರು ಇದ್ದರು.
Comments
Post a Comment