ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ:  ಬಹುತೇಕ ಕಾಂಗ್ರೆಸ್ ತೆಕ್ಕೆಗೆ ನಗರಸಭೆ-                       ಅಧ್ಯಕ್ಷ  ಸ್ಥಾನಕ್ಕೆ ನರಸಮ್ಮ ನರಸಿಂಹಲು ಮಾಡಗಿರಿ, ಉಪಾಧ್ಯಕ್ಷ ಸ್ಥಾನಕ್ಕೆ ಸಾಜಿದ್ ಸಮೀರ್ ನಾಮಪತ್ರ ಸಲ್ಲಿಕೆ.        ರಾಯಚೂರು,ಆ.28- ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ನರಸಮ್ಮ ನರಸಿಂಹಲು ಮಾಡಗಿರಿ, ಉಪಾಧ್ಯಕ್ಷ ಸ್ಥಾನಕ್ಕೆ ಸಾಜಿದ್ ಸಮೀರ್ ನಾಮಪತ್ರ ಸಲ್ಲಿಸಿದ್ದಾರೆ.   

                           ಬೆಳಿಗ್ಗೆ ನಗರಸಭೆ ಕಚೇರಿಯಲ್ಲಿ ಸಹಾಯಕ ಆಯುಕ್ತರು ಮತ್ತು ಚುನಾವಣಾಧಿಕಾರಿಗಳಾದ ಮೆಹೆಬೂಬಿ ರವರಿಗೆ ನಾಮಪತ್ರ ಸಲ್ಲಿಸಲಾಯಿತು.

 ಪೌರಾಯುಕ್ತ ಗುರು ಸಿದ್ದಯ್ಯ, ನಗರಸಭೆ ಸದಸ್ಯರಾದ ದರೂರು ಬಸವರಾಜ, ಜಿಂದಪ್ಪ , ಎಂ.ಪವನ್ ಕುಮಾರ್,ಬಿ.ರಮೇಶ್ ಉಪಸ್ಥಿತರಿದ್ದರು.                                 
ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ: 
ಬಹುತೇಕ ಅವಿರೋಧ ಆಯ್ಕೆ ನಡೆಯಲಿದೆ ಎನ್ನಲಾಗುತ್ತಿದೆ. ಕಳೆದ ಅವಧಿಗೆ ಉಪಾಧ್ಯಕ್ಷರಾಗಿದ್ದ ನರಸಮ್ಮ ಮಾಡಗಿರಿಗೆ ಮುಂದಿನ 15 ತಿಂಗಳ ಅವಧಿಗೆ ಅಧ್ಯಕ್ಷ ಸ್ಥಾನ ಒಲಿಯುವ ಸಾಧ್ಯತೆ ದಟ್ಟವಾಗಿದೆ. ಅನೇಕ ದಿನಗಳಿಂದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿರಲಿಲ್ಲ ಈಗ ಚುನಾವಣೆ ನಡೆಯುತ್ತಿದೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ