ಸೆ.03 ರಂದು ರಾಯಚೂರು ಜಿಲ್ಲೆಗೆ ಕೇಂದ್ರ ಸಚಿವ ವಿ.ಸೋಮಣ್ಣ
ರಾಯಚೂರು,ಆ.31,ಭಾರತ ಸರ್ಕಾರದ ರೈಲ್ವೆ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯದಲ್ಲಿ ಕೇಂದ್ರ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಇದೇ ಸೆ.03ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅವರು ಸೆ.03ರ ಮಂಗಳವಾರ ಬೆಳಿಗ್ಗೆ 10ಗಂಟೆಗೆ ಜಿಲ್ಲೆಯ ನಿಲಗಲ್ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಐಸಿಡಿಎಸ್ ಕಾರ್ಯಕ್ರಮದಲ್ಲಿ ಭಾಗಿ, 10.15ರಿಂದ 11ಗಂಟೆಗೆ ನಿಲಗಲ್ ನಿಂದ ಜಕ್ಕಲದಿನ್ನಿಗೆ ಪ್ರಯಾಣ, 11.30ರಿಂದ 12ಗಂಟೆಯವರೆಗೆ ಸಿರವಾರ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12ರಿಂದ 12.15ಗಂಟೆಗೆ ಸಿರವಾರದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1ಗಂಟೆಗೆ ಎಂ.ಸಿ.ಎಚ್ ಆಸ್ಪತ್ರೆಗೆ ಭೇಟಿ, 1.30ಗಂಟೆಗೆ ರಾಯಚೂರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.
Comments
Post a Comment