ಕಲ್ಯಾಣ ಕರ್ನಾಟಕದ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳಿಗೆ ಪ್ರತಿ‌ ತಿಂಗಳು ಎರೆಡು ಪುಟ ಜಾಹಿರಾತು ನೀಡುವ ಯೋಜನೆ ಸರ್ಕಾರ ಜಾರಿಗೊಳಿಸಲಿ- ಹದ್ದಿನಾಳ.     
               ರಾಯಚೂರು,ಸೆ.11- ಕಲ್ಯಾಣ ಕರ್ನಾಟಕ ಭಾಗದ ಜಿಲ್ಲಾ ಮತ್ತು ಪ್ರಾದೇಶಿಕ ದಿನ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರೆಡು ಪುಟ ವಿಶೇಷ ಜಾಹಿರಾತು ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕೆಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರು ಸಂಘದ ರಾಜ್ಯ ಉಪಾಧ್ಯಕ್ಷ ಭೀಮರಾಯ ಹದ್ದಿನಾಳ ಕೋರಿದರು.

ಅವರಿಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ವಾರ್ತಾ ಇಲಾಖೆ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರೆಡು ಪುಟ ಜಾಹಿರಾತು ನೀಡಬೇಕೆಂದು ಕೋರಿದ ಅವರು 371ಜೆ ಅಡಿ ಈ ಭಾಗದ ಏಳು ಜಿಲ್ಲೆಗಳ ಪತ್ರಿಕೆಗಳಿಗೆ ಕೆಕೆಆರ್ ಡಿಬಿ ಅನುದಾನದಡಿ ಜಾಹಿರಾತು ನೀಡಲು ಅವಕಾಶವಿದ್ದು ಪತ್ರಿಕೆಗಳ ಉತ್ತೇಜನಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದ ಅವರು 371ಜೆ ಲಭ್ಯವಾಗಲು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ದಿನಪತ್ರಿಕೆಗಳ ಪಾತ್ರ ಪ್ರಮುಖವಾಗಿದ್ದು ಪತ್ರಿಕೆಗಳನ್ನು ಅವಲಂಬಿಸಿ ಅನೇಕ ಕುಟುಂಬಗಳು ಇದ್ದು ಈ ಬಗ್ಗೆ ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನ ಕಲಬುರ್ಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಕೋರಿದರು.                                                    ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚೆನ್ನಬಸವ ಬಾಗಲವಾಡ, ಖಜಾಂಚಿ ಖಾನ್ ಸಾಬ್ ಮೋಮಿನ್ ಇದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್