ಪ್ರಜಾಪ್ರಭುತ್ವ ದಿನಾಚರಣೆ; ಜಿಲ್ಲೆಯಲ್ಲಿ ದಾಖಲೆಯ ಮಾನವ ಸರಪಳಿ ನಿರ್ಮಾಣ:

ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿ- ಶಾಸಕಿ ಕರೆಮ್ಮ. ಜಿ. ನಾಯಕ

ರಾಯಚೂರು,ಸೆ.15- ಪ್ರಜಾಪ್ರಭುತ್ವವು ಜನಸಾಮಾನ್ಯರಿಗೆ ಬಲ ತುಂಬುವ ವ್ಯವಸ್ಥೆಯಾಗಿದೆ. ಸಾರ್ವಜನಿಕರಿಗೆ ಪ್ರಜಾಪ್ರಭುತ್ವ ಬಗ್ಗೆ ಜಾಗೃತ ಮೂಡಿಸುವ ಸಲುವಾಗಿ ಈ ಮಾನವ ಸರಪಳಿ ಕಾರ್ಯಕ್ರಮ ಜರುಗಿದ್ದು, ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಸಂಕಲ್ಪ ಮಾಡಿಬೇಕು ಎಂದು ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ ಅವರು ಹೇಳಿದರು.  



ಅವರಿಂದು ಜಿಲ್ಲೆಯ ದೇವದುರ್ಗ ತಾಲೂಕಿನ ಗೂಗಲ್ ಗ್ರಾಮದ ಅಲ್ಲಮಪ್ರಭು ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. 


ದೇಶಕ್ಕೆ ಅರ್ಥಪೂರ್ಣವಾದ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ ನೀಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿ, ಇದರ ಆಶೆ ಪೂರೈಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ 2500ಕಿ.ಮೀ ವರೆಗೆ ಮಾನವ ಸರಪಳಿ ಮಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳಿಸಲು ಅದರ ತತ್ವ, ವಿಚಾರಗಳನ್ನು ಜನತೆಗೆ ಮುಟ್ಟಿಸುವ ಕಾರ್ಯ ಮಾಡಿದೆ ಎಂದರು.



ಮಾನವ ಸರಪಳಿ ನಿರ್ಮಾಣ ಕಾರ್ಯದಲ್ಲಿ ಶ್ರಮಿಸುತ್ತಿರುವ ಅಧಿಕಾರಿ ವರ್ಗಗಳ ಕಾರ್ಯ ಮೆಚ್ಚುವಂಥದ್ದು, ಪ್ರಜಾಪ್ರಭುತ್ವದಲ್ಲಿ ಸರ್ವ ಜನಾಂಗದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಇಂಥ ಕಾರ್ಯಕ್ರಮವು ದೇವದುರ್ಗದಲ್ಲಿ ಹಮ್ಮಿಕೊಂಡಿದ್ದು, ನನಗೆ ತುಂಬಾ ಖುಷಿಯ ವಿಚಾರವಾಗಿದೆ ಎಂದು ಹೇಳಿದರು. 


ಈ ವೇಳೆ ಜಿಲ್ಲಾಧಿಕಾರಿ ನಿತೀಶ್ ಕೆ., ಅವರು ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸಾರುವ ಉದ್ದೇಶದಿಂದ ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಂವಿಧಾನದ ಹಕ್ಕುಗಳನ್ನು ಎಲ್ಲರಿಗೂ ದೊರಕಬೇಕು. ವಿಶ್ವದಲ್ಲೇ ವಿಶಿಷ್ಟ ಸಂವಿದಾನವನ್ನು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ್ದಾರೆ. ನಮ್ಮ ಸಂವಿಧಾನದ ಆಸೆ ಹಾಗೂ ಹಕ್ಕುಗಳು ಎಲ್ಲರಿಗೂ ದೊರಕಬೇಕು. ಸಂವಿಧಾನಕ್ಕೆ ಧಕ್ಕೆ ಬಾರದ ರೀತಿಯಲ್ಲಿ ನೋಡಿಕೊಳ್ಳಬೇಕು. ಇದು ಸರ್ಕಾರಿ ಕಾರ್ಯಕ್ರಮ ಅನ್ನದೇ ತಮ್ಮ ಸ್ವಂತ ಕಾರ್ಯಕ್ರಮದಂತೆ ಇಲ್ಲಿಯ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಕಾರ್ಯಕ್ರಮದ ಯಶಸ್ವಿಗೆ ಕಾರಣವಾಗಿದೆ ಎಂದರು.   


109ಕಿ.ಮೀ ಉದ್ದದ ಮಾನವ ಸರಪಳಿ: ಅಂತರಾಷ್ಟ್ರಿಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರನಿಂದ ಚಾಮರಾಜನಗರದವರೆಗೆ ರಾಜ್ಯದ 31ಜಿಲ್ಲೆಗಳನ್ನು ಒಳಗೊಂಡಿರುವ ಅತಿ ಉದ್ದದ ಮಾನವ ಸರಪಳಿಯನ್ನು ಜಿಲ್ಲೆಯ ದೇವದುರ್ಗ ತಾಲೂಕಿನ ಗೂಗಲ್ ನಿಂದ ಕೊಪ್ಪರ, ಗುಂಡುಗುರ್ತಿ, ದೇವದುರ್ಗ, ಕರಿಗುಡ್ಡ, ಅಮರಾಪೂರ ಕ್ರಾಸ್, ಜಾಲಹಳ್ಳಿ, ಚಿಂಚೋಡಿ, ಬುಂಕಲದೊಡ್ಡಿ, ತಿಂಥಣಿ ಬ್ರಿಡ್ಜ್ ನಿಂದ ಲಿಂಗಸೂಗೂರು ತಾಲೂಕಿನ ಗುರುಗುಂಟಾ, ಲಿಂಗಸೂಗೂರು, ಈಚನಾಳ ತಾಂಡಾ, ಈಚನನಾಳ, ಸುಂಕನಾಳ ಮೂಲಕ ರೋಡಲಬಂಡಾದವರೆಗೂ ಜಾಗೃತಿ ಜಾಥವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 16 ಗ್ರಾಮಗಳ ಮೂಲಕ 109ಕಿ.ಮೀ ಉದ್ದದ ಮಾನವ ಸರಪಳಿಯನ್ನು ನಿರ್ಮಿಸಲಾಗಿತ್ತು.   

ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಂಘ-ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಮಾನವ ಸರಪಳಿಯನ್ನು ನಿರ್ಮಿಸುವದರ ಮೂಲಕ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮಹತ್ವ ಸಾರಿದರು. ಕಾರ್ಯಕ್ರಮದಲ್ಲಿ ರಾಯಚೂರು ಸಹಾಯಕ ಆಯುಕ್ತಾರದ ಗಜಾನನ ಬಾಳೆ ಅವರು ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಭೋದಿಸಿದರು. ಕಾರ್ಯಕ್ರಮದ ಪೂರ್ವದಲ್ಲಿ ನಾಡಗೀತೆ ಹಾಡಲಾಯಿತು. ಮಾನವ ಸರಪಳಿಯಲ್ಲಿ ಪಾಲ್ಗೊಂಡವರು ಕೈ ಕೈ ಹಿಡಿದುಕೊಂಡು ತಮ್ಮ ಎರಡು ಕೈಗಳನ್ನು ಮೇಲಕ್ಕೆ ಎತ್ತಿ ಹಿಡಿದು ಜೈಹಿಂದ್, ಜೈ ಕರ್ನಾಟಕ ಎಂಬ ಘೋಷಣೆಗಳನ್ನು ಕೂಗಲಾಯಿತು.


     

ಈ ಸಂದರ್ಭದಲ್ಲಿ ದೇವದುರ್ಗ ಎ.ಪಿ.ಎಮ್.ಸಿ ಅಧ್ಯಕ್ಷರಾದ ಆದನಗೌಡ ಬುಂಕಲದೊಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಮ್.ಪುಟ್ಟಮಾದಯ್ಯ, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣ, ರಾಯಚೂರು ನಗರಾಭೀವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮಹಿಬೂಬ್ ಜಿಲಾನಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ದೇವದುರ್ಗ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಂದ್ರ ಜಲ್ದಾರ್, ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ, ಕಾರ್ಮಿಕ ಇಲಾಖೆ ಅಧಿಕಾರಿ ಭಾರತಿ, ಸಿಡಾಕ್ ಜಂಟಿ ನಿರ್ದೇಶಕರಾದ ಜಿ.ಯು.ಹುಡೇದ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಾಲಾ& ಕಾಲೇಜ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.    


Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್