ರಿಮ್ಸ್ ಆಸ್ಪತ್ರೆಯಲ್ಲಿ 
  ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ  ಯೋಗಕ್ಷೇಮ ವಿಚಾರಿಸಿದ ಸಚಿವರು:

ಹೆಚ್ಚಿನ ಪರಿಹಾರಕ್ಕಾಗಿ ಸಿಎಂ ಸಿದ್ದರಾಮಯ್ಯರೊಂದಿಗೆ ಮಾತನಾಡಿದ್ದೇನೆ- ಸಚಿವ ಎನ್ಎಸ್ ಬೋಸರಾಜು

ರಾಯಚೂರು,ಸೆ.8-ಮಾನ್ವಿ ಲಯೋಲಾ ಶಾಲೆಯ ಬಸ್‌ ಹಾಗೂ ಸರಕಾರಿ ಬಸ್‌ ನಡುವೆ ಕಪಗಲ್ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಹಲವಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡು ರಿಮ್ಸ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವದರಿಂದ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವರಾದ ಬೋಸರಾಜು ಅವರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ, ಯೋಗಕ್ಷೇಮವನ್ನು ವಿಚಾರಿಸಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬ ಮಕ್ಕಳನ್ನು ಸಚಿವರು ಮಾತನಾಡಿಸಿ ಕುಷಲೋಪರಿ ವಿಚಾರಿಸಿದರು.


ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಹೆಚ್ಚಿನ ಚಿಕಿತ್ಸಾ ಸೌಲಭ್ಯವಿರುವ ಆಸ್ಪತ್ರೆಗಳಿಗೆ ಮಕ್ಕಳನ್ನ ವರ್ಗಾಯಿಸುವಂತೆ ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿದರು. ಮಕ್ಕಳನ್ನು ಜಾಗರೂಕತೆಯಿಂದ ವೈದ್ಯರು ಚಿಕಿತ್ಸೆಯನ್ನು ನೀಡಬೇಕೆಂದು ಅಧಿಕಾರಿಗಳಿಗೆ ಹಾಗೂ ವೈದ್ಯರಿಗೆ ತಿಳಿಸಿದರು.

ಈಗಾಗಾಗಲೆ ಕೆಎಸ್ ಆರ್ ಟಿಸಿ ಯಿಂದ  ಅಪಘಾತದಲ್ಲಿ ಮೃತಪಟ್ಟ ಮಕ್ಕಳಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗಿದೆ. ಸರ್ಕಾರದಿಂದ ಇನ್ನು ಹೆಚ್ಚಿನ ಪರಿಹಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆ. ಗಾಯಗೊಂಡ ಮಕ್ಕಳಿಗೆ ಸಂಪೂರ್ಣ ಚಿಕಿತ್ಸೆ ನೀಡುವಂತೆ ತಿಳಿಸಲಾಗಿದೆ. ಗಾಯಗೊಂಡ ಮಕ್ಕಳಿಗೂ ಪರಿಹಾರ ಕೊಡಿಸಲು ಪ್ರಯತ್ನಸಲಾಗುವುದು ಎಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ನಂತರ ಅಪಘಾತದಲ್ಲಿ ಗಾಯಗೊಂಡ  ಮಕ್ಕಳನ್ನು ನಗರದ ಖಾಸಗಿ ಆಸ್ಪತ್ರೆಯಾದ ಸುರಕ್ಷಾ ಆಸ್ಪತ್ರೆಯಲ್ಲಿ ದಾಖಲಿಸಿದ ಹಿನ್ನಲೆ ಸುರಕ್ಷಾ ಆಸ್ಪತ್ರೆಗೆ  ಭೇಟಿ ನೀಡಿ ಮಕ್ಕಳ  ಆರೋಗ್ಯದ ಕುರಿತು ವಿಚಾರಿಸಿದರು. ವೈದ್ಯರು ಸಚಿವರಿಗೆ ಮಕ್ಕಳ ಆರೋಗ್ಯದ ಸ್ಥಿತಿಯ ಕುರಿತು ವಿವರಿಸಿದರು.


ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜಯಣ್ಣ, ಕೆ ಶಾಂತಪ್ಪ, ಜಿಂದಪ್ಪ, ನಗರಸಭೆ ಉಪಾಧ್ಯಕ್ಷರಾದ ಸಾಜಿದ್ ಸಮೀರ್, ನರಸಿಂಹಲು ಮಾಡಗಿರಿ, ನಿರ್ಮಲಾ ಬೆಣ್ಣಿ, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಬಸವರಾಜ ಪಾಟೀಲ್ ಅತ್ತನೂರು, ರಿಮ್ಸ್ ಡೀನ್ ರಮೇಶ್, ಡಾ. ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್