ವಿಧಾನ ಮಂಡಲ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಂಪನಗೌಡ ಬಾದರ್ಲಿ ಹಾಗೂ ಎ.ವಸಂತಕುಮಾರ ನೇಮಕ ರಾಯಚೂರು, ಸೆ.27- ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ 2024-25 ನೇ ಸಾಲಿನ ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳನ್ನು ರಚಿಸಿ ಆದೇಶಿಸಿದೆ.
ಇದೇ ಸಂದರ್ಭದಲ್ಲಿ ರಾಯಚೂರು ಜಿಲ್ಲೆಯ ಹಿರಿಯ ನಾಯಕರು ಹಾಲಿ ಶಾಸಕರಾದ ಹಂಪನಗೌಡ ಬಾದರ್ಲಿ ಇವರನ್ನು ಅಂದಾಜುಗಳ ಸಮಿತಿಯ ಅಧ್ಯಕ್ಷರಾಗಿ ನೇಮಿಸಲಾಗಿದೆ.
ಕೆಪಿಸಿಸಿ ಕಾರ್ಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎ.ವಸಂತ ಕುಮಾರ ಅವರನ್ನು ವಿಧಾನ ಮಂಡಲದ ಜಂಟಿ ಸ್ಥಾಯಿ ಸಮಿತಿ ಯ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
Comments
Post a Comment