ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿಯಿಂದ ಪ್ರಗತಿ ಪರಿಶೀಲನಾ ಸಭೆ:

ಎಸ್ಸಿ, ಎಸ್ಟಿ ಜನಾಂಗ ವಾಸಿಸುವ ಪ್ರದೇಶಗಳಲ್ಲಿ ಸಂಪನ್ಮೂಲಗಳನ್ನು ಹೆಚ್ಚಿಸಿ-ಪಿ.ಎಂ.ನರೇಂದ್ರಸ್ವಾಮಿ

ರಾಯಚೂರು,ಸೆ.26- ಜಿಲ್ಲೆಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಜನಾಂಗದವರು ವಾಸಿಸುವ ಪ್ರದೇಶಗಳಲ್ಲಿ ಜೆ.ಜೆ.ಎಂ ಅಡಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೈಗೊಂಡು ಸಮರ್ಪಕ ನೀರು ಪೂರೈಸಬೇಕು. ಅವರು ವಾಸಿಸುವ ಪ್ರದೇಶಗಳಲ್ಲಿ ಸಂಪನ್ಮೂಲಗಳನ್ನು ಹೆಚ್ಚಿಸಬೇಕೆಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ.ನರೇAದ್ರಸ್ವಾಮಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.  


ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ವಿವಿಧ ಇಲಾಖೆಗಳು ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ನಿರ್ಮೂಲನೆಗೆ ಜಾಗೃತಿ ಕಾರ್ಯಕ್ರಮಗಳು ತೀವ್ರಗೊಳಿಸಬೇಕು. ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನೀಡಬೇಕು. ದೇವದಾಸಿಯರಿಗೆ ನಿವೇಶನ ನೀಡಬೇಕು. ಮಾಜಿ ದೇವದಾಸಿಯರ ಕುರಿತು ಸಮಾಜ ಬೇರೆ ದೃಷ್ಟಿಯಿಂದಲೇ ನೋಡುತ್ತದೆ. ಹೀಗಾಗಿ ಇವರ ನೆರವಿಗೆ ಅಧಿಕಾರಿಗಳು ಬಂದು ಸಾಮಾಜಿಕ ನ್ಯಾಯ ದೊರಕಿಸುವ ಕೆಲಸ ಮಾಡಬೇಕು ಎಂದರು. 


ಸರ್ಕಾರಿ ಶಾಲಾ-ಕಾಲೇಜಿಗೆ ಬರುವವರು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಹಾಗೂ ಬಡ ಮಕ್ಕಳೇ ಜಾಸ್ತಿ. ಹೀಗಾಗಿ ಇಂತಹ ಮಕ್ಕಳಿಗೆ ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಸರ್ಕಾರದ ಅನುದಾನ ಹೊರತಾಗಿ ಸ್ಥಳೀಯವಾಗಿ ಅನುದಾನ ಸಂಗ್ರಹಿಸಿ ಗುಣಮಟ್ಟದ ಶಿಕ್ಷಣ ನೀಡುವತ್ತ ಹೆಚ್ಚು ಮುತುವರ್ಜಿ ವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಕ್ಕಳಿಗೆ ಮೂಲಸೌಕರ್ಯ ಕೊರತೆ, ಶಿಕ್ಷಕರನ್ನು ಅತಿಥಿ ಶಿಕ್ಷಕರ ರೂಪದಲ್ಲಿ ಒದಗಿಸುವ ಮೂಲಕ ಬೋಧನೆಯ ಕೊರತೆ ನೀಗಿಸಬೇಕಿದೆ. ಶಿಕ್ಷಣದ ಮುಕ್ತ ಅವಕಾಶ ತಳ ಸಮುದಾಯದ ಮಕ್ಕಳಿಗೆ ದೊರೆಯದಿದ್ದಲ್ಲಿ ಮುಂದೆ ಅದು ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಬಹುದು. ನಿರುದ್ಯೋಗದಂತಹ ಸಮಸ್ಯೆ ತಲೆದೋರಬಹುದು. ಹೀಗಾಗಿ ಸರ್ಕಾರಿ-ಖಾಸಗಿ ಮಕ್ಕಳ ನಡುವೆ ಇರುವ ಅಂತರ ನಿವಾರಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಲೋಕೊಪಯೋಗಿ, ನೀರಾವರಿ, ಜೆಸ್ಕಾಂ, ಪಿ.ಆರ್.ಇ.ಡಿ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳುವ ಸಿವಿಲ್, ಮೂಲಸೌಕರ್ಯ ಕಾಮಗಾರಿಗಳ ಪೈಕಿ ೧ ಕೋಟಿ ರೂ. ವರೆಗಿನ ಕಾಮಗಾರಿಗಳಿಗೆ ಅನುಸೂಚಿತ ಜಾತಿ ಗುತ್ತಿಗೆದಾರರಿಗೆ ಶೇ.೧೭.೫ ಮತ್ತು ಅನುಸೂಚಿತ ಪಂಗಡಗಳ ವರ್ಗದ ಗುತ್ತಿಗೆದಾರರಿಗೆ ಶೇ.೭.೫ ರಂತೆ ಮೀಸಲಾತಿ ಅನ್ವಯ ಗುತ್ತಿಗೆ ನೀಡಲು ಸರ್ಕಾರದ ಸ್ಪಷ್ಟ ನಿರ್ದೇಶನವಿದೆ. ಇದರ ಅನ್ವಯ ವಿವಿಧ ಕಾಮಗಾರಿಗಳಲ್ಲಿ ಈ ವರ್ಗದ ಗುತ್ತಿಗೆದಾರರಿಗೆ ಅವಕಾಶ ನೀಡಿಬೇಕೆಂದರು.


ರಾಯಚೂರು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ೪,೦೦,೯೩೩ ಹಾಗೂ ಪರಿಶಿಷ್ಟ ಪಂಗಡದ ೩,೬೭,೦೭೧ ಜನಸಂಖ್ಯೆ ಹೊಂದಿದ್ದು, ಪರಿಶಿಷ್ಟ ಜಾತಿ ಶೇ.೨೦.೭೯% ಹಾಗೂ ಶೇ. ೧೯.೦೩% ಪರಿಶಿಷ್ಟ ಪಂಗಡದ ಕಂಡುಬರುತ್ತದೆ. ಜಿಲ್ಲೆಯಲ್ಲಿ ಅನುಸೂಚಿತ ಪಂಗಡಗಳ ಅನುದಾನವನ್ನು ನಿಗದಿತ ಅವಧಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮುಟ್ಟಿಸಬೇಕು. ನರೇಗಾ ಯೋಜನೆಯಡಿ ಹೆಚ್ಚಿನ ಸೌಲಭ್ಯ ಒದಗಿಸಬೇಕು. ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿವೃದ್ಧಿಯಡಿ ಸಮುದಾಯ ಬಂಡವಾಳ ನಿಧಿ ಅನುದಾನದಲ್ಲಿ ಹೆಚ್ಚಿನ ಸಾಲ ಸೌಲಭ್ಯ ಒದಗಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಜಿಲ್ಲೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಜನಾಂಗದ ಪ್ರದೇಶಗಳಲ್ಲಿ ಜೆ.ಜೆ.ಎಂ ಅಡಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೈಗೊಂಡು ಸಮರ್ಪಕ ನೀರು ಪೂರೈಸಬೇಕು. ಅವರು ವಾಸಿಸುವ ಪ್ರದೇಶಗಳಲ್ಲಿ ಸಂಪನ್ಮೂಲಗಳನ್ನು ಹೆಚ್ಚಿಸಬೇಕು. ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಾಲೋನಿಗಳಲ್ಲಿ ಕೈಗೊಂಡ ಕಾಮಗಾರಿಗಳನ್ನು ಪ್ರಗತಿಯನ್ನು ಶೇ.೧೦೦% ರಷ್ಟುç ಸಾಧಿಸಬೇಕು. ಆ ಜನಾಂಗದ ಬೇಡಿಕೆಗೆ ಅನುಗುಣವಾಗಿ ಸ್ಮಶಾನ ಭೂಮಿಯನ್ನು ಮಂಜೂರು ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.


ರಿಮ್ಸ್ ಆಸ್ಪತ್ರೆಗೆ ಬರುವ ಬಡವರಿಗೆ ರೋಗಿಗಳಿಗೆ ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಜನಾಂಗದವರಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ ಆಗದಂತೆ ನೋಡಿಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. 


  ಸಂದರ್ಭದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯರಾದ ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಬಸನಗೌಡ ದದ್ದಲ್, ಬಸವರಾಜ್ ಮತ್ತಿಮೂಡ್, ಕರೆಮ್ಮ, ಶಾಂತರಾಮ್ , ಜಗದೇವ್ ಗುತ್ತೇದಾರ್, ಅಧೀನ ಕಾರ್ಯದರ್ಶಿ  ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ಅಪರ ಜಿಲ್ಲಾಧಿಕಾರಿ ಶಿವಾನಂದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾದ ಶಶಿಕಾಂತ್ ಶಿವಪೂರೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು. 

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ