ಜಿಲ್ಲಾಡಳಿತದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ:

 ಚೆನ್ನಮ್ಮನ ಧೈರ್ಯ, ಸಾಹಸ ಪ್ರತಿಯೊಬ್ಬ ಮಹಿಳೆಗೂ ಆದರ್ಶ- ಶಶಿಕಾಂತ್ ಶಿವಪೂರೆ

ರಾಯಚೂರು,ಅ.23- ಸ್ವಾತಂತ್ರ‍್ಯ ಹೋರಾಟದ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರು ತೋರಿದಂತಹ ಧೈರ್ಯ, ಸಾಹಸ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶವಾಗಿದೆ ಎಂದರು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾದ ಶಶಿಕಾಂತ್ ಶಿವಪೂರೆ ಅವರು ಹೇಳಿದರು.


ಅವರಿಂದು  ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.


ಕಿತ್ತೂರು ರಾಣಿ ಚೆನ್ನಮ್ಮ ಅವರು ರಾಜ ಮನೆತನದವರಾಗಿದ್ದರಿಂದ ಬಾಲ್ಯದಿಂದಲೇ ಕುದುರೆ ಸವಾರಿ, ಕತ್ತಿ ಬಳಸುವ ಪರಿಗಳ ಬಗ್ಗೆ ತರಬೇತಿ ಪಡೆದಿದ್ದರು. ಚೆನ್ನಮ್ಮ ಅವರು ತನ್ನ ರಾಜ್ಯದ ರಕ್ಷಣೆಗಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ಮಹಿಳೆ. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿ ಹೆಣ್ಣು ಮಕ್ಕಳು ರಾಣಿ ಚೆನ್ನಮ್ಮ ಆದರ್ಶ, ತತ್ವಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಜಾರಿಗೊಳಿಸಬೇಕೆಂದರು.


ಈ ವೇಳೆ ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ ಅವರು ಮಾತನಾಡಿ, ರಾಣಿ ಚೆನ್ನಮ್ಮ ಸೇರಿದಂತೆ ಮಹಾನ್ ಧೀರ ದಿಟ್ಟ ಮಹಿಳೆಯರ ಮಾರ್ಗವನ್ನು ಅನುಸರಿಸಬೇಕು. ಯುವಕ-ಯುವತಿಯರು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನದಲ್ಲಿ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು.

ಈ ವೇಳೆ ಉಪನ್ಯಾಸಕರಾಗಿ ಡಾ.ದಂಡಪ್ಪ ಬಿರಾದಾರ ಅವರು ಮಾತನಾಡಿ, ಬ್ರಿಟಿಷ್ ಸರ್ಕಾರ ಜಾರಿಗೊಳಿಸಿದ್ದ ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾಯ್ದೆಯನ್ನು ವಿರೋಧಿಸಿದ ರಾಣಿ ಚನ್ನಮ್ಮ ಅವರು ಬ್ರಿಟಿಷರಿಗೆ ಸಲ್ಲಿಸಬೇಕಾಗಿದ್ದ ಕಪ್ಪ ಕಾಣಿಕೆ ಕೊಡುವುದನ್ನು ನಿರಾಕರಿಸಿದ್ದ ವೀರ ಮಹಿಳೆ ಎಂದು ಬಣ್ಣಿಸಿದರು.


ಸ್ವಾತಂತ್ರö್ಯದ ಕಿಚ್ಚು ಹಚ್ಚಿದ ಧೀರ ದಿಟ್ಟ ಮಹಿಳೆ ಚೆನ್ನಮ್ಮ. ದೇಶದ ಜನ ತಾವಿರುವ ಪ್ರದೇಶದಲ್ಲಿ ಗೌರವದಿಂದ ಬದುಕಬೇಕಾದರೇ ಸ್ವಾತಂತ್ರ‍್ಯ ಬಹಳ ಮುಖ್ಯ ಎಂದು ಅವರು ಚೆನ್ನಾಗಿ ತಿಳಿದಿದ್ದರು ಎಂದರು.


ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಯರಾಮ, ಎಸ್.ಕೆ.ಇ ಪ್ಯಾರಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಾಬುರಾವ್, ಸಮಾಜದ ಮುಖಂಡರಾದ ದಾನಮ್ಮ, ಮಹಿಳಾ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾದ ಈರಮ್ಮ ಸೇರಿದಂತೆ ಇತರರು ಇದ್ದರು.  


ಇದೇ ವೇಳೆ ಪುಟ್ಟ ಬಾಲಕಿ ವನ್ಯಶ್ರೀ ಅವರು ಕಿತ್ತೂರು ರಾಣಿ ಚೆನ್ನಮ್ಮ ವೇಷಧರಿಸಿ ಸಾರ್ವಜನಿಕರ ಗಮನ ಸೆಳೆದಳು

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ