ಸಂತೋಷ್ ನಗರ ಶಿವ ಮತ್ತು ಗಣೇಶ ಮಂದಿರ ಪುನರ್ ನಿರ್ಮಾಣಕ್ಕೆ ಆಗ್ರಹಿಸಿ ಬಿಜೆಪಿ ತೀರ್ವ ಪ್ರತಿಭಟನೆ: ಶಾಸಕ ಡಾ.ಶಿವರಾಜ ಪಾಟೀಲ್ ಸೇರಿದಂತೆ ಕಾರ್ಯಕರ್ತರ ಬಂಧನ ಬಿಡುಗಡೆ. ರಾಯಚೂರು,ನ.20- ನಗರದ ಚಂದ್ರಬಂಡ ರಸ್ತೆಯ ಸಂತೋಷ ನಗರದಲ್ಲಿದ್ದ ಶಿವ ಮತ್ತು ಗಣೇಶ ದೇವಸ್ಥಾನ ತೆರವುಗೊಳಿಸಿದ್ದನ್ನು ವಿರೋಧಿಸಿ ಬಿಜೆಪಿ ಇಂದು ತೀರ್ವ ಪ್ರತಿಭಟನೆ ನಡೆಸಿತು.
ಬೆಳಿಗ್ಗೆ ನಗರದ ಡಿಸಿ ಕಚೇರಿ ಬಳಿ ರಸ್ತೆಯಲ್ಲಿ ಕುಳಿತು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಜಿಲ್ಲಾಡಳಿತ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದ ಕಾರ್ಯಕರ್ತರು ಮಂದಿರವನ್ನು ಪುನರ್ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆ ತೀರ್ವತೆ ಪಡೆಯುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದೊಯ್ದರು. ನಗರ ಶಾಸಕ ಡಾ.ಶಿವರಾಜ ಪಾಟೀಲರನ್ನು ಪೊಲೀಸರು ವಶಕ್ಕೆ ಪಡೆದರು. ನೂರಾರು ಕಾರ್ಯಕರ್ತರು ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗುತ್ತ ರಸ್ತೆಯಲ್ಲಿ ಕುಳಿತಿದ್ದರಿಂದ ಕೆಲ ಕಾಲ ಗೊಂದಲ ಸ್ಥಿತಿ ನಿರ್ಮಾಣವಾಗಿತ್ತು.
ಈ ಸಂದರ್ಭದಲ್ಲಿ ರವೀಂದ್ರ ಜಲ್ದಾರ, ಶಂಕರ ರೆಡ್ಡಿ,ಪಿ.ಯಲ್ಲಪ್ಪ, ಸಿದ್ದನಗೌಡ ನೆಲಹಾಳ, ನರಸರೆಡ್ಡಿ, ವಿನಾಯಕ ರಾವ್,ಶಿವಕುಮಾರ್,ಡಾ.ಬಾಲ್ಕಿ, ವಿಜಯಕುಮಾರ್ ಸಜ್ಜನ್ ಸೇರಿದಂತೆ , ನಗರಸಭೆ ಸದಸ್ಯರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Comments
Post a Comment