ಗಧಾರ: ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ
ರಾಯಚೂರು,ನ.21- ತಾಲೂಕಿನ ಗಧಾರ ಸರ್ಕಾರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿಯ ಶ್ರೀ ನಿಜಾನಂದ ಯೋಗಾಶ್ರಮ ಮಲದಕಲ್ ಪೀಠಾಧಿಪತಿ ಶ್ರೀ ಗುರುಬಸವ ರಾಜಗುರುಗಳ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಹನುಮಂತಪ್ಪ ಮಾತನಾಡಿ, ಸರ್ಕಾರಿ ಶಾಲೆಗೆ ಬರುವ ಮಕ್ಕಳು ಹೆಚ್ಚಾಗಿ ಬಡತನದ ಹಿನ್ನೆಲೆ ಹೊಂದಿರುತ್ತಾರೆ. ಅಂಥ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ. ಇದರಿಂದ ಮಕ್ಕಳಲ್ಲಿ ಓದುವ ಆಸಕ್ತಿ ಹೆಚ್ಚಾಗುತ್ತದೆ ಎಂದರು ಮುಖ್ಯ ಅತಿಥಿಗಳಾಗಿ ಪತ್ರಿಕಾ ಛಾಯಾಗ್ರಾಹಕ ಸಂತೋಷ ಸಾಗರ್ ಆಗಮಿಸಿದ್ದರು. ಪ್ರೌಢಶಾಲೆಯ ಸಹಶಿಕ್ಷಕರಾದ ಸುಮಾ, ಸುಜಾತಾ, ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ತೌಸಿಫ್, ಗ್ರಾಮದ ಬಿಲ್ ಕಲೆಕ್ಟರ್, ಕುಮಾರ ನಾಯಕ, ಅಡುಗೆ ಸಿಬ್ಬಂದಿ, ಅತಿಥಿ ಶಿಕ್ಷಕರು ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.
Comments
Post a Comment