ನಗರದಲ್ಲಿ ಸಂಭ್ರಮದಿಂದ ರಂಜಾನ್ ಆಚರಣೆ
ರಾಯಚೂರು ಮಾ.31 ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಪವಿತ್ರ ಹಬ್ಬ ರಂಜಾನ್ ಸಡಗರ, ಸಂಭ್ರಮದಿಂದ ಇಂದು ಆಚರಿಸಿದರು.
ರಂಜಾನ್ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಉಪವಾಸ ವೃತ ಮಾಡಿದ್ದ ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆ ಧರಿಸಿ, ನಗರದ ವಿವಿಧ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದರು.
ನಗರದ ಹೊಸ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ವ್ಯವಸ್ಥೆ ಮಾಡಲಾಗಿತ್ತು. ತಮ್ಮ ಮಕ್ಕಳೊಂದಿಗೆ ಈದ್ಗಾ ಮೈದಾನಕ್ಕೆ ಆಗಮಿಸಿದ್ದ ಮುಸ್ಲಿಂ ಬಾಂಧವರು, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಜಿಲ್ಲಾಧಿಕಾರಿಗಳಿಂದ ಶುಭಾಶಯ: ನಗರದ ಹೊಸ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯ ಬಳಿಕ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯವನ್ನು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಕೋರಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬೀನ್ ಮೊಹಾಪಾತ್ರ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಾದ ಸಂಗಮೇಶ, ಮುಖಂಡರಾದ ರವಿ ಭೋಸರಾಜ್, ರವಿ ಪಾಟೀಲ್ ಸೇರಿದಂತೆ ಪಾಲಿಕೆ ವಿವಿಧ ಸದಸ್ಯರು ಹಾಗೂ ಇತರರು ಇದ್ದರು.
Comments
Post a Comment