
ಮಂತ್ರಾಲಯ : ಮಾಜಿ ಸಿಎಂ ಯಡಿಯೂರಪ್ಪ ಭೇಟಿ. ಜಯ ಧ್ವಜ ನ್ಯೂಸ್ ರಾಯಚೂರು,ಮೇ.1- ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿದರು. ಶ್ರೀ ಮಠದಿಂದ ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು. ಮಂಚಾಲಮ್ಮ ದರ್ಶನ ಪಡೆದು ನಂತರ ರಾಯರ ಬೃಂದಾವನ ದರ್ಶನ ಪಡೆದರು. ತದನಂತರ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರು ಫಲ ಮಂತ್ರಾಕ್ಷತೆ , ಶೇಷವಸ್ತ್ರ, ಸ್ಮರಣಿಕೆ ನೀಡಿ ಆಶೀರ್ವಾದ ಮಾಡಿದರು .