ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಲ್ಲಿ ಕಲ್ಯಾಣ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧಿಕೃತ ಸಂಯೋಜನೆ- ಜಗನ್ನಾಥ ಕುಲಕರ್ಣಿ. ಜಯಧ್ವಜ ನ್ಯೂಸ್ ರಾಯಚೂರು, ಏ.24- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಡಿ ಕಲ್ಯಾಣ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧಿಕೃತ ಸಂಯೋಜನೆಗೊಳಿಸಲಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಾಜಿ ಉಪಾಧ್ಯಕ್ಷ ಹಾಗೂ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮಾಜಿ ನಿರ್ದೇಶಕ ಜಗನ್ನಾಥ ಕುಲಕರ್ಣಿ ತಿಳಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಬ್ರಾಹ್ಮಣ ಸಮಾಜ ಸಂಘಟನೆಗಾಗಿ ಕಲ್ಯಾಣ ಕರ್ನಾಟಕ ಮಹಾಸಭಾ ಹುಟ್ಟು ಹಾಕಲಾಗಿತ್ತು ಇದೀಗ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದೊಂದಿಗೆ ಜಂಟಿಯಾಗಿ ಸಮಾಜ ಸಂಘಟನೆ ಹಾಗೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಜಗನ್ನಾಥ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments
Post a Comment