ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಕುಲಪತಿಗಳ ನೇಮಕಗೊಳಿಸಿ- ರಘುವೀರ ನಾಯಕ. ಜಯ ಧ್ವಜ ನ್ಯೂಸ್, ರಾಯಚೂರು,ಏ.27- ಆದಿ ಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಕಾಯಂ ಕುಲಪತಿಗಳ ನೇಮಕ ಮಾಡುವಂತೆ ಹೈದ್ರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕರ ಸಂಘ ವಿಭಾಗೀಯ ಕಾರ್ಯದರ್ಶಿ ಎನ್.ರಘುವೀರ ನಾಯಕ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ 2021ರಲ್ಲಿ ನೂತನ ವಿಶ್ವ ವಿದ್ಯಾಲಯವಾಗಿ ಅಸ್ತಿತ್ವಕ್ಕೆ ಬಂದ ರಾಯಚೂರು ವಿಶ್ವ ವಿದ್ಯಾಲಯಕ್ಕೆ ಇತ್ತೀಚೆಗೆ ಸರ್ಕಾರ ಮಹರ್ಷಿ ವಾಲ್ಮೀಕಿರವರ ಹೆಸರು ನಾಮಕರಣ ಮಾಡಿದ್ದು ಬಿಟ್ಟರೆ ವಿವಿಗೆ ಸಮರ್ಪಕ ಅನುದಾನ ಸಹ ದೊರೆಯುತ್ತಿಲ್ಲ ವೆಂದು ದೂರಿದರು. ಕಲ್ಯಾಣ ಕರ್ನಾಟಕ ಭಾಗದ ಸಮರ್ಥರನ್ನು ಕುಲಪತಿಗಳನ್ನಾಗಿ ನೇಮಕ ಮಾಡಬೇಕೆಂದು ಒತ್ತಾಯಿಸಿದ ಅವರು ಪ್ರಭಾರಿ ಕುಲಪತಿಗಳ ನೇಮಕದಿಂದ ಅಭಿವೃದ್ಧಿ ಅಸಾದ್ಯ ಕೂಡಲೆ ನೂತನ ಕುಲಪತಿಗಳನ್ನು ನೇಮಿಸಬೇಕೆಂದು ಒತ್ತಾಯಿಸಿದ ಅವರು ಕೂಡಲೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ ಮಾಡಬೇಕು ಹೆಚ್ಚಿನ ಅನುದಾನ ಒದಗಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ರಾಚಣ್ಣ ನಾಯಕ, ರಾಮಕೃಷ್ಣ ನಾಯಕ್,ರಾಮು ನಾಯಕ, ಬೋಳಬಂಡಿ , ನರೇಂದ್ರ ನಾಯಕ್ ಇದ್ದರು.
Comments
Post a Comment